ಪುಟ್ಪಾತ್ ಆಕ್ರಮಿತ ಅಂಗಡಿಗಳ ತೆರವು
ಯಾದಗಿರಿ: ಪಾದಚಾರಿಗಳಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಇಲ್ಲಿಯ ನಗರಸಭೆ ಅಧಿಕಾರಿಗಳು ಶುಕ್ರವಾರ ನಗರದ ಬಸ್ ನಿಲ್ದಾಣ ಎದುರು ಹಾಗೂ ಸುಭಾಶ್ಚಂದ್ರ ಬೋಸ್ ವೃತ್ತದ ಅಕ್ಕಪಕ್ಕದ ಪುಟ್ಪಾತ್ನಲ್ಲಿ ಅಕ್ರಮ ಹಾಗೂ ನಿಯಮ ಬಾಹಿರವಾಗಿ ತಲೆ ಎತ್ತಿದ್ದ ಅಂಗಡಿಗಳನ್ನು ತೆರವುಗೊಳಿಸಿದರು.
ನಗರಸಭೆ ಪೌರಾಯುಕ್ತ ಮಹ್ಮದ್ ಮುನೀರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಸಿಬ್ಬಂದಿ, ಫುಟ್ಪಾತ್ ಒತ್ತುವರಿ ಜಾಗವನ್ನು ಜೆಸಿಬಿ ಯಂತ್ರವನ್ನು ಬಳಸಿ ತೆರವು ಮಾಡಿದರು. ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಕಾರ್ಯಾಚರಣೆ ವೇಳೆ ಸಿಬ್ಬಂದಿ ಕೈಬಂಡಿ ಮತ್ತು ಅಂಗಡಿ ಮೇಲೆ ಹಾಕಿರುವ ಟಿನ್ಗಳನ್ನು ವಶಕ್ಕೆ ಪಡೆದುಕೊಂಡರು.
ಮಾತಿನ ಚಕಮಕಿ: ಈ ಸಮಯದಲ್ಲಿ ಏಕಾಏಕಿ ಅಧಿಕಾರಿಗಳು ತೆರವುಗೊಳಿಸಲು ಮುಂದಾದಾಗ ಗೊಂದಲ ವಾತಾವರಣ ಸೃಷ್ಟಿಯಾಯಿತು. ಅಧಿಕಾರಿಗಳು ಹಾಗೂ ಅಂಗಡಿ ಮಾಲೀಕರ ಮಧ್ಯೆ ಮಾತಿನ ಚಕಮುಕಿ ನಡೆಯಿತು. ಆದರೆ ಅಂಗಡಿ ಮಾಲೀಕರಿಗೆ ಸೂಕ್ತ ಮನವರಿಕೆ ಮಾಡಿಕೊಟ್ಟು ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು. ಇದರಿಂದ ಬಸ್ ನಿಲ್ದಾಣದ ಸಮೀಪ ಫುಟ್ಪಾತ್ನಲ್ಲಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾದಂತಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

