ಜಿಲ್ಲಾ ಕೇಂದ್ರದ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ: ಮಾಗನೂರ
ಯಾದಗಿರಿ: ಯಾದಗಿರಿ ಜಿಲ್ಲಾ ಕೇಂದ್ರವಾಗಿ 3 ವರ್ಷ ಕಳೆದರೂ ಇನ್ನೂ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿದೆ. ಇದಕ್ಕೆ ಸ್ಥಳೀಯ ಶಾಸಕರ ಇಚ್ಚಾಶಕ್ತಿ ಕೊರತೆಯೇ ಕಾರಣ. ಆದ್ದರಿಂದ ಈ ಬಾರಿ ಬಿಜೆಪಿ ಬೆಂಬಲಿಸಿ ಅಭಿವೃದ್ಧಿಗೆ ನೆರವಾಗಿ ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ ಮಾಗನೂರ ಮನವಿ ಮಾಡಿದರು.
ನಗರದ 30 ಮತ್ತು 31ನೇ ವಾರ್ಡಿನಲ್ಲಿ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ಜಿಲ್ಲಾ ಕೇಂದ್ರವು ಅಭಿವೃದ್ಧಿಯಲ್ಲಿ ಕುಂಠಿತ ಕಾಣುತ್ತಿದೆ.ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ 23 ನೀರಾವರಿ ಯೋಜನೆಗಳನ್ನು ಮಂಜೂರು ಮಾಡಿದೆ. ಇದಕ್ಕಾಗಿಯೇ ರು. 10 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಡಾ.ನಂಜುಡಪ್ಪ ವರದಿ ಸಮರ್ಪಕವಾಗಿ ಅನುಷ್ಠಾನವಾಗಿದೆ. ವರದಿಯಲ್ಲಿ ತಿಳಿಸಿರುವಂತೆ 10 ಸಾವಿರ ಕೋಟಿ ರು.ಗಳನ್ನು ಹೈಕ ಭಾಗದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ತಿಳಿಸಿದರು.
ಈ ಚುನಾವಣೆಯಲ್ಲಿ ಯುವಕರ ತಂಡ ಹಾಗೂ ಎಲ್ಲಾ ವರ್ಗದ ಜನತೆ ಬದಲಾವಣೆಗಾಗಿ ಬಿಜೆಪಿಯನ್ನು ಬೆಂಬಲಿಸುತ್ತಿರುವುದರಿಂದ ನನಗೆ ಹೆಚ್ಚಿನ ಶಕ್ತಿ ಬಂದಿದೆ. ಗೆಲುವಿಗಾಗಿ ಎಲ್ಲರ ಸಲಹೆ ಸೂಚನೆ ಪಡೆದಿದ್ದೇನೆ. ಎಲ್ಲ ಕಡೆ ಪಕ್ಷಕ್ಕೆ ಬೆಂಬಲ ಸಿಗುತ್ತಿದೆ. ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಿಜೆಪಿ ರಾಜ್ಯದಲ್ಲಿ ಮನೆಮಾತಾಗಿದೆ. ಮತಕ್ಷೇತ್ರದಲ್ಲಿನ ಗಂಭೀರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನನ್ನ ಕೈ ಬಲಪಡಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.
ಮುಖಂಡರಾದ ನಿಂಗಣ್ಣ ಹತ್ತಿಮನಿ, ಲಗಮಪ್ಪ ಮುಂಡರಗಿ, ಮಹೆಂದ್ರಪ್ಪ, ಎಚ್.ಆರ್ ಶಿವಮೂರ್ತಿ, ಕೆ.ಮಲ್ಲಿಕಾರ್ಜುನ ಸ್ವಾಮಿ, ಟಿ.ಎಚ್. ಬಿರಾದರ್, ಸುಭಾಶ ರಾಠೋಡ್, ರಾಜು ಯಡ್ಡಳ್ಳಿ ಇದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

