ಪ್ರಜಾಪ್ರಭುತ್ವ ಬಲವರ್ಧನೆಗೆ ಕಡ್ಡಾಯವಾಗಿ ಮತ ಚಲಾಯಿಸಿ: ಅನ್ಸಾರಿ
ಯಾದಗಿರಿ: ಜಗತ್ತಿನಲ್ಲೆ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದು. ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನಷ್ಟು ಬಲಿಷ್ಠವಾಗಲು ಪ್ರತಿಯೊಬ್ಬರೂ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಬಿ. ಅನ್ಸಾರಿ ಹೇಳಿದರು.
ಅವರು ನಗರದ ಎಐಟಿಯುಸಿ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಮಿಕರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಾರ್ಮಿಕರು ಗುರುತಿನ ಚೀಟಿ ಪಡೆದುಕೊಳ್ಳುವುದರ ಜತೆಗೆ ಜಾಗೃತರಾಗಬೇಕು. ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳು ಜಾರಿಯಲ್ಲಿದ್ದು, ಅದರ ಪ್ರಯೋಜನ ಪಡೆದುಕೊಳ್ಳಬೇಕು. ಕಾರ್ಮಿಕರ ಸಂಘಟನೆ ಮೂಲಕ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಸೈದಪ್ಪ ಗುತ್ತೇದಾರ, ಜಿಲ್ಲಾದ್ಯಂತ ಇರುವ ಕಾರ್ಮಿಕರು ಸಂಘಟಿತರಾಗುವ ಮೂಲಕ ತಮಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಕಾರ್ಮಿಕರು ತಮ್ಮ ಮತದಾನದ ಹಕ್ಕನ್ನು ಮಾರಿಕೊಳ್ಳದೇ ಸೂಕ್ತ ವ್ಯಕ್ತಿಗೆ ಚಲಾಯಿಸುವ ಮೂಲಕ ನಿರ್ಣಾಣಯಕ ಪಾತ್ರ ವಹಿಸಬೇಕು ಎಂದು ಹೇಳಿದರು.
ಇದೇ ವೇಳೆ ಕಡ್ಡಾಯ ಮತದಾನ ಮಾಡುವ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಮಿಕ ಸಂಘದ ತಾಲೂಕ ಅಧ್ಯಕ್ಷ ದೇವಜಿ ಜಾದವ್, ಮಲ್ಲಪ್ಪ ಹೊಸಳ್ಳಿ, ಆರ್.ಎನ್.ಶಿವರಾಜ, ರಾಜಮಹ್ಮದ, ವೆಂಕಟೇಶ ತನ್ನೀರ್, ಹಣಮಂತ, ಗೋಪಾಲ ಪವಾರ್, ಸುರೇಶ, ಬೋಜು, ವಿರುಪಣ್ಣ ನಾಯಕ, ಸಾಬಣ್ಣ, ದೇವು ಇದ್ದರು.
--
ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಬಿರುಸಿನ ಪ್ರಚಾರ
ಸುರಪುರ: ನಾನು ಅಧಿಕಾರ ಕಳೆದುಕೊಂಡಿದ್ದರೂ ಜನರಿಂದ ಯಾವತ್ತೂ ದೂರವಾಗಿಲ್ಲ. ಪ್ರತಿಯೂಬ್ಬರ ಸಮಸ್ಯೆಗೆ ಸ್ಪಂದಿಸುವ ಮೂಲಕ ಜನಮಾನಸದಲ್ಲಿದ್ದೇನೆ. ನಮ್ಮ ಸಹಕಾರ ಮನೋಭಾವ ನೋಡಿ ಜನಸಾಗರವೇ ಹರಿದು ಬರುತ್ತಿದೆ. ನಮ್ಮ ಜನಶಕ್ತಿಯನ್ನು ನೋಡಿ ಎದುರಾಳಿಗಳಿಗೆ ಈಗಾಗಲೆ ಸೋಲಿನ ಭೀತಿ ಹುಟ್ಟಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ತಾಲೂಕಿನ ಹೆಮನೂರಿನಲ್ಲಿ ಪ್ರಚಾರ ಕೈಗೊಂಡು ಮಾತನಾಡಿ, ನಾನು ನನ್ನ ಅಧಿಕಾರವಧಿಯಲ್ಲಿ ಮಾಡಿದ ಸಾಧನೆಗಳನ್ನು ಹೇಳುವುದರಿಂದ ಯಾವುದೇ ಲಾಭವಿಲ್ಲ. ನಾನೇನು ಮಾಡಿದ್ದೇನೆ ಎನ್ನುವುದು ಜನರ ಮುಂದಿದೆ. ಈ ಬಾರಿ ಗೆಲ್ಲಿಸಿದರೆ ಅಭಿವೃದ್ಧಿ ಮಾಡಿ ತೋರಿಸುತ್ತೇನೆಯೇ ವಿನಃ ಇತರರಂತೆ ಬಡಾಯಿ ಕೊಚ್ಚುವುದಿಲ್ಲ. ನಾನು ಬೇರೆಯರಂತೆ ಪಕ್ಷ ಬದಲಿಸುವ ರಾಜಕಾರಣಿ ಅಲ್ಲ. ಒಂದೇ ಪಕ್ಷದಲ್ಲಿದ್ದು ವರಿಷ್ಠರ ಪ್ರೀತಿಗೆ ಪಾತ್ರನಾಗಿದ್ದೇನೆ. ಅವರ ಕೃಪಾಶೀರ್ವಾದದಿಂದ ಟಿಕೆಟ್ ಪಡೆಯಲು ಸಾಧ್ಯವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ನನ್ನನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ನಿಮ್ಮ ಸೇವೆ ಮಾಡುವ ಅವಕಾಶ ಒದಗಿಸಬೇಕೆಂದು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

