ಬಿಎಸ್‌ಆರ್ ಕಾಂ. ಗೆಲವು ನಿಶ್ಚಿತ: ಬೈಲಪ್ಪ
ಕನ್ನಡಪ್ರಭ ವಾರ್ತೆ, ಜೇವರ್ಗಿ, ಮೇ.2
ಜೇವರ್ಗಿ ಕ್ಷೇತ್ರದಲ್ಲಿ ವಿರೋಧ ಪಕ್ಷಗಳು ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಾಣೆಯಾಗಿದ್ದು, ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದಾನೆ ಎಂದು ಅಪಪ್ರಚಾರ ಮಾಡುತ್ತಿದ್ದು, ಅದಕ್ಕೆ ಮತದಾರರು ಕಿವಿಗೊಡಬಾರದು ಎಂದು ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೈಲಪ್ಪ ನೆಲೋಗಿ ಹೇಳಿದರು.
ಅವರಾದ ಗ್ರಾಮದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತ, ಕಳೆದ ಒಂದು ವರ್ಷದಿಂದ ಕ್ಷೇತ್ರದಲ್ಲಿ ಸಂಚರಿಸುತ್ತಿದ್ದು, ಮತದಾರರ ಒಲವು ಪಕ್ಷದ ಕಡೆ ವ್ಯಕ್ತವಾಗುತ್ತಿದ್ದು, ಈ ಚುನಾವಣೆಯಲ್ಲಿ ತಮ್ಮ ಗೆಲವು ನಿಶ್ಚಿತ. ಅದನ್ನು ಸಹಿಸಲಾಗದ ವಿರೋಧ ಪಕ್ಷಗಳು ತಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆಂದು ಆರೋಪಿಸಿದರು.
ಕಣದಿಂದ ಹಿಂದೆ ಸರಿದಿಲ್ಲ: ನಾಮಪತ್ರ ಹಿಂದಕ್ಕೆ ಪಡೆಯಲು ಕಾಂಗ್ರೆಸ್ ಪಕ್ಷ ನಿರಂತರ ಒತ್ತಡ ಹೇರಿದ್ದರೂ ತಾವು ಚುನಾವಣಾ ಕಣದಿಂದ ಹಿಂದೆ ಸರಿದಿಲ್ಲ. ಪ್ರೀತಿ ವಿಶ್ವಾಸದಿಂದ ಮತದಾರರ ಮನ ಗೆಲ್ಲಬೇಕು, ಹೊರತಾಗಿ ಹಣದಿಂದಲ್ಲ. ಜನಪರ ಸಮಸ್ಯೆಗಳಿಗಾಗಿ ನಿರಂತರ ಹೋರಾಟ ನಡೆಸುವ ಉದ್ದೇಶದಿಂದ ಬಿಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಬಿಎಸ್‌ಆರ್ ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಸಭೆಯಲ್ಲಿ ತಾಲೂಕು ಜಿಪಂ ಸದಸ್ಯ ಶೋಭಾ ಬಾಣಿ, ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಧನರಾಜ ರಾಠೋಡ, ರಾಜಶೇಖರ ಮುತ್ತಕೋಡ ಇದ್ದರು.
ನನ್ನ ಗೆಲವು ಖಚಿತ: ಯಾಕಾಪುರ ವಿಶ್ವಾಸ
ಕನ್ನಡಪ್ರಭ ವಾರ್ತೆ, ಚಿಂಚೋಳಿ, ಮೇ.2
ಚಿಂಚೋಳಿ ಮೀಸಲು ವಿಧಾನಸಭೆ ಚುನಾವಣೆಯಲ್ಲಿ ಕೇವಲ ಬಿಜೆಪಿ- ಕಾಂಗ್ರೆಸ್ ಪಕ್ಷಗಳ ಮಧ್ಯೆ ನೇರ ಸ್ಪರ್ಧೆಯಿದೆ. ತಾಲೂಕಿನಲ್ಲಿ ದುರಾಡಳಿತ ನಡೆಸಿದ ಕೆಜೆಪಿ ಅಭ್ಯರ್ಥಿ ಸೋಲು ಖಚಿತವಾಗಿದ್ದು, ಚಿಂಚೋಳಿ ಮತಕ್ಷೇತ್ರದ ಜನರು ಬಿಜೆಪಿಗೆ ಹೆಚ್ಚಿನ ಒಲವು ತೊರಿಸುತ್ತಿದ್ದು, ನನ್ನ ಗೆಲವು ಖಚಿತ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಯಾಕಾಪುರ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಗಡಿಭಾಗದ ಕುಂಚಾವರಂ ಗ್ರಾಮದಲ್ಲಿ ಬುಧವಾರ ಸಂಜೆ ಬಹಿರಂಗ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿ, ತಾಲೂಕಿನಲ್ಲಿ ಬಿಜೆಪಿ ಸರ್ಕಾರದಿಂದ ಕುಂಚಾವರಂ ಗಡಿಭಾಗದಲ್ಲಿರುವ ತಾಂಡಾ ಮತ್ತು ಗ್ರಾಮಗಳಿಗೆ ಸಾಕಷ್ಟು ಅನುದಾನ ನೀಡಿ ಅಭಿವೃದ್ಧಿಪಡಿಸಲಾಗಿದೆ ಎಂದರು.
ಚುನಾವಣೆಯಲ್ಲಿ ಆಯ್ಕೆಗೊಂಡರೆ ಈ ಹಿಂದುಳಿದ ಭಾಗಕ್ಕೆ ವಿಶೇಷ ಕಾಳಜಿ ವಹಿಸಿ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ತಾಪಂ ಸದಸ್ಯ ಶಾಮಸುಂದರ ಪವಾರ, ಮಧುಸೂಧನ ಕಾಟಾಪುರ, ರೇವಣಸಿದ್ದಪ್ಪ ಮಜ್ಜಗಿ, ಶ್ರೀಧರ ಪಾಟೀಲ್, ಶಂಕರ ಮಹಾರಾಜ್ ವಂಟಿಚಿಂತಾ ಮುಂತಾದವರು ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿ ಮಾತನಾಡಿದರು.
ವೆಂಕಟಾಪುರ, ಮಗದಂಪುರ, ಶಾದೀಪುರ, ಧರ್ಮಾಸಾಗರ, ಬಡಾತಾಂಡಾ, ಲಚಮಾಸಾಗರ, ಬೋನಸಪುರ, ಶಿವರಾಮಪುರ, ಪೋಚಾವರಂ, ಜಿಲವರ್ಷ ಮುಂತಾದ ಗ್ರಾಮಗಳಲ್ಲಿ ಪಾದಯಾತ್ರೆ ಮೂಲಕ ಮತಯಾಚನೆ ನಡೆಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

