ಜಿಲ್ಲಾದ್ಯಂತ ಇಂದು ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ
ಯಾದಗಿರಿ: ಮೇ 5ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕರು ಮುಕ್ತ ಹಾಗೂ ಶಾಂತಿಯುತವಾಗಿ ಮತ ಚಲಾಯಿಸಲು ಅನುಕೂಲವಾಗುವಂತೆ ಮತ್ತು ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಜಿಲ್ಲಾದ್ಯಂತ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ರಾಜೇಂದ್ರ ಚೋಳನ್ ಆದೇಶಿಸಿದ್ದಾರೆ. ಭಾನುವಾರ ಸಂಜೆ 7ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮತಗಟ್ಟೆಯಿಂದ 200 ಮೀ. ವ್ಯಾಪ್ತಿ ಒಳಗಡೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ ಮತ್ತು ಬಳಸುವಂತಿಲ್ಲ. ಬೆ.7ರಿಂದ ಮತದಾನ ಮುಗಿಯುವವರೆಗೆ ಮತಗಟ್ಟೆಯ 200 ಮೀ. ವ್ಯಾಪ್ತಿ ಹೊರತುಪಡಿಸಿ ಗುಂಪಾಗಿ ಜನ ಸೇರುವಂತಿಲ್ಲ. ಮತದಾನ ಮಾಡಲು ಬಂದ ಮತದಾರರಿಗೆ ಮತಗಟ್ಟೆ ಹತ್ತಿರ ಮತ ನೀಡುವಂತೆ ಆಸೆ ಅಮಿಷ ತೋರಿಸುವುದನ್ನು ಮತ್ತು ಮತದಾರರಿಗೆ ಮತದಾನ ಮಾಡುವಂತೆ ಒತ್ತಾಯಿಸುವಂತಿಲ್ಲ ಮತ್ತು ಯಾವುದೇ ಪಕ್ಷಗಳ ಚಿಹ್ನೆಯುಳ್ಳ ಬಾವುಟ ಪ್ರದರ್ಶಿಸುವಂತಿಲ್ಲ. ಅದರಂತೆ ಆಯುಧ, ಲಾಠಿ, ಚಾಕು ಇತ್ಯಾದಿ ಮಾರಕಾಸ್ತ್ರಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

