ನಮೋಶಿ ವಿರುದ್ಧ ಕ್ರಮಕ್ಕೆ ಒತ್ತಾಯ
ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಮೇ 4
ಗುಲ್ಬರ್ಗ ದಕ್ಷಿಣ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಶಿಲ್ ನಮೋಶಿ ಅವರು ಚುನಾವಣಾ ಮತ ಚೀಟಿಯೊಂದಿಗೆ ಕ್ರಮ ಸಂಖ್ಯೆ ಹೊಂದಿರುವ ಚೀಟಿ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಎಸ್.ಕೆ. ಕಾಂತಾ ಒತ್ತಾಯಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮೋಶಿ ಅವರು ತಾವು ಸೋಲುವ ಭೀತಿಯಿಂದ ಕ್ಷೇತ್ರಾದ್ಯಂತ ಕಾರ್ಯಕರ್ತರೊಂದಿಗೆ ತೆರಳಿ ಮತ ಚೀಟಿಯೊಂದಿಗೆ ಕ್ರಮ ಸಂಖ್ಯೆ ಹೊಂದಿರುವ ಚೀಟಿ ಹಾಗೂ ಹಣ ನೀಡಿ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಚುನಾವಣಾಧಿಕಾರಿಗಳು ಕ್ರಿಮಿನಲ್ ಕೇಸ್ ದಾಖಲಿಸಿ ನಮೋಶಿ ವಿರುದ್ಧ ಕ್ರಮ ಜರುಗಿಸಿ ನ್ಯಾಯ ಸಮ್ಮತ ಮತ ಚಲಾವಣೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಕ್ಷೇತ್ರದಲ್ಲಿ ಕೆಜೆಪಿ ಪರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತಾವು ಗೆಲ್ಲುವುದು ನಿಶ್ಚಿತ. ಹೀಗಾಗಿ ಪ್ರತಿ ಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಹಣದ ಹೊಳೆ ಹರಿಸುತ್ತಿದ್ದಾರೆ. ಮತದಾರರು ಹಣದ ಆಮಿಷಕ್ಕೆ ಒಳಗಾಗದೆ ಜನ ಸೇವೆ ಮಾಡುವ ಅಭ್ಯರ್ಥಿಗೆ ಮತ ನೀಡಿ ಎಂದು ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

