ಜಿಲ್ಲಾದ್ಯಂತ ಮೆರವಣಿಗೆ, ಪಟಾಕಿ ಸಿಡಿಸುವಿಕೆ ನಿಷೇಧ: ಜಗದೀಶ
ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಮೇ 7
ಜಿಲ್ಲೆಯ 9 ವಿಧಾನಸಭಾ ಮತಕ್ಷೇತ್ರಗಳ ಮತ ಎಣಿಕೆ ಕಾರ್ಯ ಮೇ 8ರಂದು ಬೆಳಗ್ಗೆ 8ರಿಂದ ಗುಲ್ಬರ್ಗ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಕಟ್ಟಡಗಳಲ್ಲಿ ನಡೆಯಲಿದೆ.
ಇದಕ್ಕಾಗಿ ಜಿಲ್ಲಾ ದಂಡಾಧಿಕಾರಿ ಡಾ. ಕೆ.ಜಿ. ಜಗದೀಶ ಅವರು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರ ಅನ್ವಯ ಮೇ 8ರಂದು ಗುಲ್ಬರ್ಗ ಜಿಲ್ಲಾದ್ಯಂತ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲ ತರಹದ ಮೆರವಣಿಗೆಗಳನ್ನು ಹಾಗೂ ಪಟಾಕಿ ಸಿಡಿಸುವುದನ್ನು ಮತ್ತು ಪಟಾಕಿಗಳನ್ನು ಹಿಡಿದುಕೊಂಡು ತಿರುಗಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ರಾಜಕೀಯ ಅಭ್ಯರ್ಥಿಗಳ ಬೆಂಬಲಿಗರು ಗೆದ್ದ ಅಭ್ಯರ್ಥಿಗಳ ಪರವಾಗಿ ಗುಂಪು ಗುಂಪಾಗಿ ಮೆರವಣಿಗೆ ಮಾಡುವುದು, ಸಾರ್ವಜನಿಕ ರಸ್ತೆ ಮತ್ತು ಸ್ಥಳಗಳಲ್ಲಿ, ಪಕ್ಷದ ಕಚೇರಿ ಹಾಗೂ ಮತ ಎಣಿಕೆ ಕೇಂದ್ರದ ಮುಂದೆ ಮೆರವಣಿಗೆ ನಡೆಸುವುದು ಹಾಗೂ ಪಟಾಕಿ ಸಿಡಿಸಿ ಸಂಭ್ರಮಿಸುವುದು ಸಾರ್ವಜನಿಕ ಜನಜೀವನಕ್ಕೆ ಶಾಂತಿಭಂಗ ಉಂಟಾಗುವ ಸಾಧ್ಯತೆ ಇರುವುದು. ಈ ಆದೇಶವು ಧಾರ್ಮಿಕ ಮತ್ತು ಶವ ಸಂಸ್ಕಾರ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ.
ಇದೇ ಕಾಯ್ದೆಯಡಿ ಮತ ಎಣಿಕೆ ಕಾರ್ಯದಲ್ಲಿ ಭಾಗವಹಿಸುವ ನೌಕರರು, ವಿವಿಧ ಪಕ್ಷಗಳ ಏಜೆಂಟರು ಮತ್ತು ಅಭ್ಯರ್ಥಿಗಳು, ಮತ ಎಣಿಕೆ ಕೇಂದ್ರದ ಒಳಗಡೆ ಬೆಂಕಿ ಪೊಟ್ಟಣ, ಸಿಗರೇಟ್, ಬೀಡಿ, ಲೈಟರ್, ಗುಟಕಾ ಪ್ಯಾಕೆಟ್, ಫೌಂಟನ್ ಪೆನ್ ಮತ್ತು ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು ಬರುವುದನ್ನು ನಿಷೇಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

