ಇಂದು ಕಾರ್ಯಾಗಾರ
ಗುಲ್ಬರ್ಗ: ಚನ್ನಮಲ್ಲೇಶ್ವರ ಪತ್ತಿನ ಸಹಕಾರ ಸಂಘ ಮತ್ತು ಕರ್ನಾಟಕ ಸ್ಟೇಟ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಗಳ ಸಂಯುಕ್ತಾಶ್ರಯದಲ್ಲಿ ಮೇ 10ರಂದು ನಗರದ ಗುಡಲಕ್ ಹೋಟಲ್‌ನಲ್ಲಿ ಹತ್ತಿನ ಸಹಕಾರ ಸಂಘಗಳಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಎಲ್ಲ ಪತ್ತಿನ ಸಹಕಾರ ಸಂಘಗಳು ಭಾಗವಹಿಸಬೇಕೆಂದು ಚನ್ನಮಲ್ಲೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಲ್ಲಿನಾಥ ಹಾದಿಮನಿ ಕೋರಿದ್ದಾರೆ.
'ತೀರ್ಪಿಗೆ ತಲೆಬಾಗುವೆ'
ಚಿತ್ತಾಪುರ: ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತದಾರರಿಂದ ನೀರಿಕ್ಷಿತ ಫಲಿತಾಂಶ ಬರದೇ ಇದ್ದದರಿಂದ ಮತದಾರರ ತೀರ್ಪಿಗೆ ತಲೆಬಾಗುವೆ ಎಂದು ಚಿತ್ತಾಪುರದ ಮಾಜಿ ಶಾಸಕ ವಾಲ್ಮೀಕಿ ನಾಯಕ ಹೇಳಿದ್ದಾರೆ. ದೂರವಾಣಿ ಮೂಲಕ ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರೂ ಮತದಾರ ಪಕ್ಷಕ್ಕೆ ಮನ್ನಣೆ ನೀಡಿಲ್ಲ. ಮುಂಬರುವ ದಿನಗಳಲ್ಲಿ ತಪ್ಪುಗಳನ್ನು ತಿದ್ದಿಕೊಂಡು ಪಕ್ಷ ಸಂಘಟನೆ ಒತ್ತು ನೀಡಿ ಮತದಾರರ ಒಲವು ಗಳಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಇಂದಿನಿಂದ ತರಬೇತಿ
ಗುಲ್ಬರ್ಗ: ಗುಲ್ಬರ್ಗದ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಮೇ 10 ರಿಂದ 31ರವರೆಗೆ ಬಾಸ್ಕೆಟ್ ಬಾಲ್ ಕ್ರೀಡೆ ಬೇಸಿಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ 10 ವರ್ಷದಿಂದ 18 ವರ್ಷದ ಬಾಲಕ ಬಾಲಕಿಯರು ಭಾಗವಹಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪ್ರಶಾಂತಕುಮಾರ ಮೊ. 9972895856 ಹಾಗೂ ಶಂಕರ ಸೂರ್ಯ ಮೊ. 9845254876ನ್ನು ಅಥವಾ ದೂ. 08472-278637 ದಿಂದ ಪಡೆಯಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

