ಸಿದ್ದು ಸಿಎಂ: ಸಂಭ್ರಮಾಚರಣೆ
ಯಾದಗಿರಿ: ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಘೋಷಣೆ ಮಾಡುತ್ತಿದ್ದಂತೆ ಹೈದರಾಬಾದ ಕರ್ನಾಟಕ ಹಿಂದುಳಿದ ಜಾತಿಗಳ ಯುವಜನ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ನಗರದ ಸುಭಾಷ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಲಾಯಿತು. ಹಿಂದುಳಿದ ವರ್ಗಗಳ ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿರುವುದು ಸ್ವಾಗತಾರ್ಹ. ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಸಂಘದ ಜಿಲ್ಲಾಧ್ಯಕ್ಷ ಹೊನ್ನಪ್ಪ ಎನ್. ದೇವರಹಳ್ಳಿ, ಸೈದಪ್ಪ ಗುತ್ತೇದಾರ, ದೇವು ಪೂಜಾರಿ, ಸಾಹೇಬಗೌಡ ಮಳ್ಳಳ್ಳಿ, ನಿಂಗಣ್ಣ, ಚಂದ್ರಕಾಂತ, ಶರಣಪ್ಪ, ಬಸವರಾಜ ಹೊರಟೂರು, ರವಿರಾಜ ಖಾನಾಪುರ ಇದ್ದರು.
ಮಣ್ಣು ಮಾದರಿ ಸಂಗ್ರಹಣಾ ಸಪ್ತಾಹ
ಯಾದಗಿರಿ: ತಾಲೂಕಿನ ಕೂಡಲೂರ ಗ್ರಾಮದಲ್ಲಿ ಕೃಷಿ ಇಲಾಖೆ, ಸೈದಾಪುರ ರೈತ ಸಂಪರ್ಕ ಕೇಂದ್ರದ ಆಶ್ರಯದಲ್ಲಿ ಮಣ್ಣು ಮಾದರಿ ಸಂಗ್ರಹಣಾ ಸಪ್ತಾಹ ಮತ್ತು ಸ್ಥಳದಲ್ಲಿಯೇ ಮಣ್ಣು ಪರೀಕ್ಷೆ ಮಾಡಿಕೊಡುವ ಕಾರ್ಯಕ್ರಮ ಜರುಗಿತು. ಸೈದಾಪುರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರಾಜಕುಮಾರ ಅವರು ಮಣ್ಣು ಪರೀಕ್ಷೆ ಮಹತ್ವ ಮತ್ತು ಮಣ್ಣಿನ ಮಾದರಿ ಸಂಗ್ರಹಿಸುವ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು. ಮಣ್ಣು ರೈತರ ಕಣ್ಣು ಪರೀಕ್ಷೆ ಇದ್ದಂತೆ. ಅದನ್ನು ಅನುಸರಿಸಿ ರೈತರು ತಮ್ಮ ಕಾರ್ಯ ಕೈಗೊಳ್ಳಬೇಕೆಂದು ಹೇಳಿದರು. ಸ.ಕೃಷಿ ಅಧಿಕಾರಿ ವೀರಯ್ಯ ಸ್ವಾಮಿ ಮಣ್ಣು ಪರೀಕ್ಷೆಗಾಗಿ ಮಣ್ಣಿನ ಮಾದರಿ ಸಂಗ್ರಹಿಸುವುದರ ಬಗ್ಗೆ ಪ್ರಾಯೋಗಿಕವಾಗಿ ರೈತರಿಗೆ ಮನವರಿಕೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

