ಸಿಎಂ ಸ್ಥಾನ: ಖರ್ಗೆಗೆ ವಂಚನೆ- ಆಕ್ರೋಶ
ಕ.ಪ್ರ. ವಾರ್ತೆ ಗುಲ್ಬರ್ಗ ಮೇ 10-
ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನದಿಂದ ವಂಚಿಸಿರುವ ಕ್ರಮವನ್ನು ಖಂಡಿಸಿ ಶುಕ್ರವಾರ ನಗರದಲ್ಲಿ ದಲಿತ ಮುಖಂಡರು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ವಿ.ಆರ್. ಚಾಂಬಾಳ, ಬಾಳಿ ಅವರ ನೇತೃತ್ವದಲ್ಲಿ ನೂರಾರು ಮುಖಂಡರು ನಗರದ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಗುಲ್ಬರ್ಗ ವಿಶ್ವವಿದ್ಯಾಲಯದ ಬಳಿ ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
ವಲಸೆ ಬಂದವರಿಗೆ ಮಣೆ: ರಾಜ್ಯ ರಾಜಕೀಯದಲ್ಲಿಯೇ ಹಿರಿಯ ನಾಯಕ ಮತ್ತು ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿ ಹೆಚ್ಚು ಅನುಭವ ಹೊಂದಿರುವ ಖರ್ಗೆ ಅವರಿಗೆ ಕೆಲವು ನಾಯಕರ ಪಿತೂರಿಯಿಂದ ಎರಡು ಬಾರಿ ಮುಖ್ಯಮಂತ್ರಿ ಸ್ಥಾನ ತಪ್ಪಿ ಹೋಗಿತ್ತು. ಈಗಲೂ ಈ ಹುದ್ದೆಯಿಂದ ತಪ್ಪಿಸಿ ವಲಸೆ ಬಂದ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಖರ್ಗೆ ಅವರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.
ದಲಿತ ಎಂಬ ಕಾರಣಕ್ಕಾಗಿ..: ದಲಿತ ಎಂಬ ಕಾರಣಕ್ಕಾಗಿ ಅರ್ಹ, ಸಮರ್ಥ, ಪ್ರಾಮಾಣಿಕ ನಾಯಕರಿಗೆ ಮುಖ್ಯಮಂತ್ರಿ ಹುದ್ದೆಯಿಂದ ವಂಚಿಸಲಾಗಿದೆ. ಖರ್ಗೆ ಅವರು ದಲಿತ ಜನಾಂಗಕ್ಕೆ ಸೀಮಿತವಾಗಿಲ್ಲ. ಅವರು ಸರ್ವ ಜನಾಂಗದ ಏಳ್ಗೆಗಾಗಿ ದುಡಿಯುತ್ತಿದ್ದಾರೆ. ಹೈ.ಕ. ಭಾಗಕ್ಕೆ 371(ಜೆ) ವಿಧಿ ಸಂಸತ್ತಿನಲ್ಲಿ ತಿದ್ದುಪಡಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಎಲ್ಲ ಅಂಶಗಳನ್ನು ಅರಿತಿರುವ ಹೈಕಮಾಂಡ್ ಖರ್ಗೆಗೆ ತಕ್ಕ ಸ್ಥಾನಮಾನ ನೀಡದೆ ಮೋಸಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

