ಗುಲ್ಬರ್ಗಾ

ಖರ್ಗೆಗೆ ಸಿಎಂ ಸ್ಥಾನ ಅಲಭ್ಯ: ಪ್ರತಿಭಟನೆ

Published On :

ಗುಲ್ಬರ್ಗ: ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡದಿರುವ ಕ್ರಮವನ್ನು ಖಂಡಿಸಿ ಶನಿವಾರ ನಗರದಲ್ಲಿ ವಿವಿಧ ಸಂಘಟನೆಗಳ ಪ್ರಮುಖರು ಕಪ್ಪು ಬಟ್ಟೆ ಧರಿಸಿ ಮೌನ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಕಿಡಿಗೆಡಿಗಳು ಕಲ್ಲು ತೂರಾಟ ಮಾಡಿದ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಜಿಪಂ ಸದಸ್ಯೆ ಅನೀತಾ ಪವನಕುಮಾರ ವಳಕೇರಿ ಸ್ಪಷ್ಟಪಡಿಸಿದ್ದಾರೆ.
ಬೆಳಗ್ಗೆ 11.30 ಗಂಟೆಗೆ ನಗರದ ಜಗತ್ ವೃತ್ತದಿಂದ ಆರಂಭವಾದ ಮೌನ ಪ್ರತಿಭಟನಾ ಮೆರವಣಿಗೆಯು ಮುಖ್ಯ ರಸ್ತೆಯ ಮುಖಾಂತರ ಹಾದು ಹೋಗುವ ಸಂದರ್ಭದಲ್ಲಿ ನಡೆದ ಕೃತ್ಯವನ್ನು ಯಾವುದೇ ಪಕ್ಷದ ಕಾರ್ಯಕರ್ತರಾಗಲಿ, ದಲಿತ ಮುಖಂಡರಾಗಲಿ ನಡೆಸಿಲ್ಲ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.