ಖರ್ಗೆಗೆ ಅನ್ಯಾಯ; ರಸ್ತೆ ತಡೆ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಚಿತ್ತಾಪುರ, ಮೇ 11
ದಲಿತ ಮುಖಂಡ, ರಾಜಕೀಯ ಮುತ್ಸದ್ಧಿ ಹಾಗೂ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಶಹಾಬಾದ್ ಕ್ರಾಸ್ನಲ್ಲಿ ಒಂದು ಗಂಟೆ ಕಾಲ ರಸ್ತೆ ತಡೆ ಮಾಡಿ ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಖರ್ಗೆ ಅವರು ಪಕ್ಷದ ನಿಷ್ಠಾವಂತ ನಾಯಕರಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಅವರ ಕೊಡುಗೆ ಅಪಾರವಾಗಿದೆ. ಕರ್ನಾಟಕದಲ್ಲಿ ಪಕ್ಷಕ್ಕೆ ಬಹುಮತ ಬಂದರೆ ಖರ್ಗೆ ಅವರಿಗೆ ಸಿಎಂ ಮಾಡುವುದಾಗಿ ಹೈಕಮಾಂಡ್ ಹೇಳಿತು.
ಆದರೆ ಸಿದ್ದರಾಮಯ್ಯ ಅವರನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡಿ ದಲಿತ ನಾಯಕನಿಗೆ ಅನ್ಯಾಯ ಮಾಡಲಾಗಿದೆ. ಎಂದು ಆರೋಪಿಸಿದರು.
ಸಿದ್ದರಾಮಯ್ಯನವರ ಆಯ್ಕೆ ರದ್ದು ಮಾಡಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರರಿಗೆ ಸಲ್ಲಿಸಿದರು. ತಹಸೀಲ್ದಾರ್ ಮನವಿ ಪತ್ರ ಸ್ವೀಕರಿಸಿದರು.
ರಸ್ತೆ ತಡೆಯಲ್ಲಿ ತಾಲೂಕು ಸಂಚಾಲಕ ಮಲ್ಲಿಕಾರ್ಜುನ ಬೆಣ್ಣೂರಕರ್, ನಾಗರಾಜರಡ್ಡಿ, ಆನಂದ ಕಲ್ಲಕ್, ಮಹಾಂತೇಶ ಬೊಮ್ಮನಹಳ್ಳಿಕರ್, ಮಾರುತಿ ಹುಳಗೋಳಕರ್, ಲೋಹಿತ ಮದ್ದಡಿಗಿ, ಹಣಮಂತ ಕಲ್ಲಕ, ಸಂಜೀವಕಾಶಿ, ರಾಜಪ್ಪ ಹಂಡೆಕಾರ, ವಿಜಯಕುಮಾರ ದೊಡ್ಮನಿ, ಕಾಶಿನಾಥ ಬೋವಿ, ಪ್ರಿಯಾಂಕ್ ಖರ್ಗೆ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಶಿವಯೋಗಿ ರಾವೂರ, ಸಂಜು ಕಾಶಿ, ಮಲ್ಲು ರಾಜೋಳ್ಳಿ, ಶರಣು ಹೊಸ್ಸುರು, ರಾಜು ಸ್ವಾಮಿ, ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

