ಗುಲ್ಬರ್ಗಾ

ಡಿಸಿ ಜಮಾದಾರ್ ಅಧಿಕಾರ ಸ್ವೀಕಾರ

Published On :

ಯಾದಗಿರಿ: ಜಿಲ್ಲೆಯಲ್ಲಿ ಕುಂಠಿತಗೊಂಡಿರುವ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಹೆಚ್ಚಿಸಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕುಡಿವ ನೀರಿನ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ತಿಳಿಸಿದರು.
  ಬುಧವಾರ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಮೊದಲು ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಇಲ್ಲಿಯ ಸಮಸೆಗಳ ಬಗ್ಗೆ ಸಂಪೂರ್ಣ ಅರಿವಿದೆ. ಈಗ ಬೇಸಿಗೆ ಇರುವುದರಿಂದ ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗಿದೆ. ಇದುವರೆಗೆ ಕೈಗೊಂಡ ಕಾಮಗಾರಿ ಹಾಗೂ ಜಾನುವಾರುಗಳಿಗೆ ಮೇವು ಎಷ್ಟು ಸಂಗ್ರಹವಿದೆ ಎಂಬುದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಶೀಘ್ರ ಸ್ಪಂದಿಸುವ ಕಾರ್ಯ ಮಾಡಲಾಗುವುದು ಎಂದರು.
  ಜಿಲ್ಲಾ ಕೇಂದ್ರದಲ್ಲಿ ಸಿಗ್ನಲ್, ಬೀದಿ ದೀಪ ಹಾಗೂ ನಗರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು. ಈ ಸಂಬಂಧ ಪೌರಾಯುಕ್ತರೊಂದಿಗೆ ಚರ್ಚಿಸಿ ಸದ್ಯದ ಸ್ಥಿತಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕೆರೆ ಮತ್ತು ಕೋಟೆಯ ಜೀರ್ಣೋದ್ಧಾರ ಕಾಮಗಾರಿಗೆ  ನಾನು ಇದ್ದಾಗ ವೇಗ ಹೆಚ್ಚಿಸಿದ್ದೆ. ಆದರೆ ಚುನಾವಣೆ ಬಂದಿದ್ದರಿಂದ ಕೆಲ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿವೆ. ಹೀಗಾಗಿ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿ ಈ ಎಲ್ಲಾ ಕಾಮಗಾರಿಗಳನ್ನು ಪುನರಾರಂಭಿಸಲಾಗುವುದು. ಸರ್ಕಾರ ತಮ್ಮನ್ನು ಮತ್ತೆ ಯಾದಗಿರಿಗೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿದೆ. ಹೀಗಾಗಿ ಜಿಲ್ಲೆಯ ಜನರ ಸೇವೆ ಮಾಡಲು ಮತ್ತೆ ಅವಕಾಶ ಬಂದಿದ್ದು, ಜನರ ಸಹಕಾರ ಜಿಲ್ಲಾಡಳಿತಕ್ಕೆ ಅಗತ್ಯ ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಜಹೀರಾ ನಸೀಮ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.