ಗುಲ್ಬರ್ಗಾ

ಇಂದು ವಿದ್ಯುತ್ ವ್ಯತ್ಯಯ

Published On :

ಗುಲ್ಬರ್ಗ: ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ಮೇ 18ರಂದು 11ಕೆ.ವಿ. ಸಿದ್ದೇಶ್ವರ ಫೀಡರ್ ಮೇಲೆ ಆರ್‌ಎಪಿಡಿಆರ್‌ಪಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.
ಈ ನಿಟ್ಟಿನಲ್ಲಿ ಮೇ 18ರಂದು ಬೆಳಗ್ಗೆ 9.30ರಿಂದ ಸಂಜೆ 4 ಗಂಟೆಯವರಗೆ ಗುಬ್ಬಿ ಕಾಲೋನಿ, ಕೆಎಚ್‌ಬಿ ಕಾಲೋನಿ ಮೂರನೇ ಹಂತ, ಸುಂದರ ನಗರ, ಜಿಡಿಎ ಸಂತ್ರಾಸವಾಡಿ, ಸಮಾಧಾನ ಹೊಟೇಲ್, ಬಿಲಗುಂದಿ ಲೇಔಟ್, ಬಡೇಪುರ, ಓಂ ನಗರ, ಸ್ವಸ್ತಿಕ್ ನಗರ, ಪ್ರಗತಿ ಕಾಲೋನಿ, ಲುಕ್‌ಮೆನ್ ಕಾಲೇಜು, ಆರ್‌ಟಿಒ ಕಚೇರಿ ಹಿಂಭಾಗ ಹಾಗೂ ಪಾರ್ಲೆ ಐಸ್ ಫ್ಯಾಕ್ಟರಿ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಗ್ರಾಹಕರ ಸೇವಾ ಕೇಂದ್ರದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
'ಡಾ. ಅಜಯಸಿಂಗ್ ಸಚಿವರಾಗಲಿ'
ಜೇವರ್ಗಿ: ಅಭಿವೃದ್ಧಿ ದೃಷ್ಟಿಕೋನ ಹೊಂದಿರುವ ಡಾ.ಅಜಯಸಿಂಗ್ ಅವರನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಕಲ್ಪಿಸಬೇಕು ಎಂದು ತಾಲೂಕು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೈಯದ್ ಫಯಾಜುದ್ದೀನ್ ಜಮಾದಾರ ಆಗ್ರಹಿಸಿದ್ದಾರೆ. ಡಾ. ಅಜಯಸಿಂಗ್ ಅವರು ಕಳೆದ ದಶಕಗಳಿಂದ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಿದ್ದಾರೆ. ದೀನ, ದಲಿತ, ಹಿಂದುಳಿದ, ಅಲ್ಪಸಂಖ್ಯಾತರು ಸೇರಿದಂತೆ ರೈತಪರ, ಜನಪರ ಸಮಸ್ಯೆಗಳಿಗೆ ಸ್ಪಂದಿಸುತ್ತ ಜನಾನುರಾಗಿಯಾಗಿ ಅತ್ಯಧಿಕ ಮತಗಳಿಂದ ಕ್ಷೇತ್ರದಲ್ಲಿ ಚುನಾಯಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ನಾಳೆ ವಿಚಾರ ಸಂಕಿರಣ
ಗುಲ್ಬರ್ಗ: ಮೇ 19ರಂದು ಬೆಳಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ ಮತ್ತು ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.
ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಈ. ಟಿ.ಪುಟ್ಟಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಲಿತ ಸಾಹಿತ್ಯದ ಮೇಲೆ ಡಾ. ಅಂಬೇಡ್ಕರ್ ಪ್ರಭಾವ ಕುರಿತು ಸಾಹಿತಿ ಪ್ರೊ. ಕೆ.ಎಸ್. ಭಗವಾನ ವಿಚಾರ ಮಂಡಿಸುವರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ, ಕೆಬಿಜೆಎನ್‌ಎಲ್ ಕಾರ್ಯಪಾಲಕ ಅಭಿಯಂತರ ಸುರೇಶ ಶರ್ಮಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಅರ್ಜುನ ಗೋಳಸಂಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಿ. ಲಿಟ್ ಪದವಿ ಪುರಸ್ಕೃತ ಗುವಿಗು ಕನ್ನಡ ಅಧ್ಯಯನದ ಪ್ರಾಧ್ಯಾಪಕ ಪ್ರೊ. ಎಚ್.ಟಿ. ಪೋತೆ, ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ಬೆಂಗಳೂರಿನ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ಸತೀಶಕುಮಾರ ಹೊಸಮನಿ ಅವರನ್ನು ಸನ್ಮಾನಿಸಲಾಗುವುದು.
ಕಾಯಂ ಪಡಿತರ ಪಡೆಯಲು ಸೂಚನೆ
ಗುಲ್ಬರ್ಗ: ಮಹಾನಗರ ಪಾಲಿಕೆ ಹಿಂಬದಿಯಲ್ಲಿರುವ ಸ್ವರ್ಣ ಜಯಂತಿ ಕೊಠಡಿ ಬಳಿಯಲ್ಲಿ ಆಹಾರ ನಿರೀಕ್ಷಕರಿಂದ ತಾತ್ಕಾಲಿಕ ಪಡಿತರ ಚೀಟಿದಾರರು ಕಾಯಂ ಪಡಿತರ ಚೀಟಿಗಳನ್ನು ಪಡೆಯುವಂತೆ ಗುಲ್ಬರ್ಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಪ್ರಸಕ್ತ ಮಾಹೆಯಲ್ಲಿ ಬಾಕಿ ಇರುವ ತಾತ್ಕಾಲಿಕ ಪಡಿತರ ಚೀಟಿದಾರರು, ತಾತ್ಕಾಲಿಕ ಪಡಿತರ ಚೀಟಿಗಳನ್ನು ಹಿಂತಿರುಗಿಸಿ ಆಹಾರ ನಿರೀಕ್ಷಕರಿಂದ ಕಾಯಂ ಪಡಿತರ ಚೀಟಿಗಳನ್ನು ಪಡೆಯಲು ಅವರು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.