ಗುಲ್ಬರ್ಗಾ

ಆರ್ಥಿಕ ಗಣತಿ ಕಾರ್ಯ ಯಶಸ್ವಿಗೆ ಡಿಸಿ ಸೂಚನೆ

Published On :


ಕನ್ನಡಪ್ರಭ ವಾರ್ತೆ  ಯಾದಗಿರಿ  ಮೇ 19
ರಾಜ್ಯಾದ್ಯಂತ ಜೂ.1ರಿಂದ ಆರಂಭವಾಗುವ 6ನೇ ಆರ್ಥಿಕ ಗಣತಿ ಕಾರ್ಯವನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ಸೂಚಿಸಿದರು.
 ಜಿಲ್ಲಾಧಿಕಾರಿ ಕಚೇರಿ ಸಭಾ ಭವನದಲ್ಲಿ  6ನೇ ಆರ್ಥಿಕ ಗಣತಿ ಕುರಿತ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ನೇಮಕಗೊಂಡ 9 ಜನ ಚಾರ್ಜ್ ಅಧಿಕಾರಿಗಳಾದ ತಹಸೀಲ್ದಾರರು, ಪೌರಾಯುಕ್ತರು, ಪುರಸಭೆ ಮುಖ್ಯಾಧಿಕಾರಿಗಳು ಸರ್ಕಾರದ ಮಾರ್ಗಸೂಚಿ ಪ್ರಕಾರ ಆರ್ಥಿಕ ಗಣತಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದರು.
  ರಾಜ್ಯಾದ್ಯಂತ ಈ ಗಣತಿ ಕಾರ್ಯವು ಜೂನ್ 1ರಿಂದ ಜೂ.30ರವರೆಗೆ ಭಾರತ ಸರ್ಕಾರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯ, ಕರ್ನಾಟಕ ಸರ್ಕಾರದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಹಭಾಗಿತ್ವದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
 ಈ ಗಣತಿಯನ್ನು ಅಂಕಿ-ಅಂಶ ಸಂಗ್ರಹಣೆ ಕಾಯಿದೆ ಅಡಿಯಲ್ಲಿ ಕೈಗೊಳ್ಳಲಾಗುತ್ತಿದ್ದು, ಗಣತಿಯಲ್ಲಿ ಎಲ್ಲಾ ಉದ್ಯಮ ಸಂಸ್ಥೆಗಳಿಂದ ಮಾಹಿತಿಯನ್ನು ಕಲೆ ಹಾಕಲಾಗುತ್ತದೆ. ಈ ಗಣತಿಯಲ್ಲಿ ನಾಗರಿಕರು ನೀಡಲಿರುವ ಮಾಹಿತಿಯು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ವಿವಿಧ ಅಭಿವೃದ್ಧಿ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಮಹತ್ವದ್ದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
  ಮನೆ, ಉದ್ಯಮ, ಸಂಸ್ಥೆಗೆ ಭೇಟಿ ನೀಡಲಿರುವ ಗಣತಿದಾರರಿಗೆ ಸಂಪೂರ್ಣ ಸಹಕಾರವನ್ನು ನೀಡುವ ಮೂಲಕ ಮತ್ತು ಸರ್ಕಾರವು ರಾಜ್ಯದ ಜನತೆಯ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಲು ಸಂಪೂರ್ಣವಾದ ಮತ್ತು ನಿಖರವಾದ ಮಾಹಿತಿಯನ್ನು ನೀಡುವ ಮೂಲಕ ಜಿಲ್ಲೆಯ ನಾಗರಿಕರು ಸಹಕರಿಸಬೇಕೆಂದು ಮನವಿ ಮಾಡಿದರು.
  ಜಿಪಂ ಮುಖ್ಯ ಕಾರ್ಯ ನಿರ್ವಾಹಕ  ಅಧಿಕಾರಿ ಎಸ್.ಎ. ಜಿಲಾನಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.