ಈಡಿಗ ಜಾಗೃತಿ ವೇದಿಕೆಯಿಂದ ಪ್ರತಿಭಟನೆ
ಗುಲ್ಬರ್ಗ: ರಾಜ್ಯ ಸಚಿವ ಸಂಪುಟದಲ್ಲಿ ಅಫಜಲ್ಪುರ ಶಾಸಕ ಮಾಲೀಕಯ್ಯ ಗುತ್ತೇದಾರ ಅವರಿಗೆ ಸಚಿವ ಸ್ಥಾನ ನೀಡದೆ ಈಡಿಗ ಸಮಾಜವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾ ಈಡಿಗ ಜಾಗೃತಿ ವೇದಿಕೆ ನೇತೃತ್ವದಲ್ಲಿ ಅಭಿಮಾನಿಗಳು ಭಾನುವಾರ ನಗರದ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಮತ್ತು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಟೈರ್‌ಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಸಮರ್ಥವಾಗಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಹಿರಿಯ ಶಾಸಕರಾಗಿರುವ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡದೆ ವಂಚಿಸಲಾಗಿದೆ. ಎರಡನೇ ಸಚಿವ ಸಂಪುಟ ಪಟ್ಟಿಯಲ್ಲಿ ಗುತ್ತೇದಾರ ಅವರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ದುರಂತ; ನಿವೃತ್ತ ಶಿಕ್ಷಕನ ಮನೆ ಭಸ್ಮ
ಗುಲ್ಬರ್ಗ: ನಗರ ಹೊರವಲಯದ ಹೀರಾಪುರದಲ್ಲಿ ಶನಿವಾರ ಮಧ್ಯರಾತ್ರಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ ನಿವೃತ್ತ ಶಿಕ್ಷಕ ವೀರಣ್ಣ ಜಾನಿ ಅವರ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಮನೆಯವರು ಬೆಂಕಿಯ ಬಿಸಿಯಿಂದಾಗಿ ಹೊರಬಂದಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದಾಗ್ಯೂ ಮನೆಯಲ್ಲಿ ಅಂಗಳದಲ್ಲಿ ಸಾಕಲಾಗಿದ್ದ ಕೋಳಿಗಳು ಅಗ್ನಿ ಜ್ವಾಲೆಗೆ ಸುಟ್ಟು ಕರಕಲಾಗಿವೆ. ಈ ದುರಂತದಲ್ಲಿ ಮನೆಯಲ್ಲಿದ್ದ ಬೆಲೆಬಾಳುವ ಸಾಮಗ್ರಿಗಳೆಲ್ಲ ಸುಟ್ಟು ಹೋಗಿವೆ ಎಂದು ವೀರಣ್ಣ ಇವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿರುವ ಅಗ್ನಿಶಾಮಕ ಸೇವೆಗಳ ತಂಡಕ್ಕೆ, ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಇಂದು ವಾಸವಿ ಜಯಂತ್ಯುತ್ಸವ
ಗುಲ್ಬರ್ಗ: ಆರ್ಯ ವೈಶ್ಯ ಸಮಾಜದ ವತಿಯಿಂದ ಮೇ 20ರಂದು ನಗರದ ನಗರೇಶ್ವರ ದೇವಸ್ಥಾನದಲ್ಲಿ ವಾಸವಿ ಜಯಂತಿ ಉತ್ಸವ ಹಮ್ಮಿಕೊಳ್ಳಲಾಗಿದೆ. ವಾಸವಿ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲು ರಾಘವೇಂದ್ರ ಮೈಲಾಪುರ ಅವರ ಅಧ್ಯಕ್ಷತೆಯಲ್ಲಿ ಸಭೆ ನಿರ್ಣಯ ತೆಗೆದುಕೊಂಡಿದೆ. ಅಭಿಷೇಕ, ಪೂಜೆ, ಪೂಜಾ ಸಾಮಾಗ್ರಿಗಳ ವ್ಯವಸ್ಥೆಯನ್ನು ಕೇದಾರನಾಥ ಜಾಜಿ ಅವರು ನಡೆಸಿಕೊಡುವರು. ತೊಟ್ಟಿಲು ಅಲಂಕಾರವನ್ನು ಹಾಗೂ ದೇವಸ್ಥಾನದ ಅಲಂಕಾರವನ್ನು ಶಂಕರ ಗಾದಾ ಮತ್ತು ಮಿತ್ರರು ನಡೆಸಿಕೊಡುವರು. ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ನಾಳೆ ಜಯಂತಿ
ಆಳಂದ: ತಾಲೂಕಿನ ಬಂಗರಗಾ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಮೇ 23ರಂದು ಬೆಳಗಿನ 11ಗಂಟೆಗೆ ನಡೆಯಲಿದೆ. ಸಂಘಾನಂದ ಭಂತೇಜಿ ಸಾನ್ನಿಧ್ಯ ವಹಿಸುವರು. ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾದೇವ ಧನ್ನಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಬಿ.ಆರ್. ಪಾಟೀಲ್ ಮತ್ತಿತರ ಗಣ್ಯರು ಆಗಮಿಸುವರು. ಕೆರಪ್ಪ ವಾಘ್ಮೋರೆ ಅಧ್ಯಕ್ಷತೆ ವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

