ಗುಲ್ಬರ್ಗಾ

'ಕುಡಿವ ನೀರು, ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಆದ್ಯತೆ'

Published On :

ಕನ್ನಡಪ್ರಭ ವಾರ್ತೆ   ಚಿಂಚೋಳಿ   ಮೇ 19
ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ರಾಮಯ್ಯ ಆದೇಶದಂತೆ ಗ್ರಾಮಗಳಲ್ಲಿನ ಕುಡಿವ ನೀರಿನ ಮತ್ತು ವಿದ್ಯುತ್ ಸಮಸ್ಯೆ ಕಡೆಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಶಾಸಕ ಡಾ. ಉಮೇಶ ಜಾಧವ ತಿಳಿಸಿದರು.
ಪಟ್ಟಣದಲ್ಲಿ ನಾಗರಿಕ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಗ್ರಾಮಗಳ ಜನರು ನೀಡಿದ ಮನವಿಗೆ ಸ್ಪಂದಿಸಿದ್ದು, ಪಸ್ತಪುರ ಮತ್ತು ತಾಂಡಾಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.
ಖಾನಾಪುರ ಗ್ರಾಮದಲ್ಲಿ ವಿದ್ಯುತ್ ಪರಿವರ್ತಕ ಸುಟ್ಟು ಹೋಗಿದ್ದು, ಅದನ್ನು ತೆಗೆದು ಹಾಕಿ ಹೊಸ ವಿದ್ಯುತ್ ಪರಿವರ್ತಕ ಜೋಡಿಸಿ ಜನರಿಗೆ ಕುಡಿವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ ಎಂದ ಅವರು, ಮೇ 28ರಂದು ನಡೆಯುವ ವಿಧಾನಸಭೆ ಅಧಿವೇಶನದ ನಂತರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿ ಕ್ರಮ ಕೈಕೊಳ್ಳಲಾಗುವುದು ಎಂದರು.
ತಾಲೂಕಿನಲ್ಲಿ ಮುಂಗಾರು ಹಂಗಾರು ಬಿತ್ತನೆ ಸಂದರ್ಭದಲ್ಲಿ ರೈತರಿಗೆ ಬೀಜ ಮತ್ತು ಗೊಬ್ಬರ ಕೊರತೆ ಆಗದಂತೆ ಸೂಕ್ತ ಗಮನ ಹರಿಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸದ್ಯದ ಮಟ್ಟಿಗೆ ತಾಲೂಕಿನಲ್ಲಿ ಕುಡಿವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಹೆಚ್ಚು ಗಮನ ನೀಡಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.