ಗುಲ್ಬರ್ಗಾ

ಮನೆ ಕಳ್ಳತನ

Published On :

ಗುಲ್ಬರ್ಗ: ಮನೆಯೊಂದರ ಬೀಗ ಮುರಿದು ಕಳ್ಳರು ಮನೆಯಲ್ಲಿದ್ದ ಅಲಮಾರಿಯನ್ನೇ ಹೊತ್ತೊಯ್ದ ಘಟನೆ ನಗರದ ಹಳೇ ಜೇವರ್ಗಿ ರಸ್ತೆಯಲ್ಲಿರುವ ಕೆಇಬಿ ಕ್ವಾಟ್ರಸ್‌ನಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.
ಜೆಸ್ಕಾಂನ ಲೆಕ್ಕಪತ್ರ ಶಾಖೆಯಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿರುವ ರಾಮರಾವ ಎಂಬುವವರ ಮನೆಯ ಬೀಗ ಮುರಿದು ಅಲಮಾರಿಯನ್ನು ಹೊತ್ತೊಯ್ಯಲಾಗಿದ್ದು, ಇವರು ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋದ ವೇಳೆ ಈ ಕಳ್ಳತನ ನಡೆದಿದೆ ಎಂದು ತಿಳಿದು ಬಂದಿದೆ. ಅಲಮಾರಿಯಲ್ಲಿ ಚಿನ್ನ ಮತ್ತು ನಗದು ಇತ್ತು ಎಂದು ತಿಳಿದು ಬಂದಿದ್ದು, ಎಷ್ಟು ರುಪಾಯಿ ಮೌಲ್ಯದ ನಗ- ನಾಣ್ಯ ಕಳ್ಳತನವಾಗಿದೆ ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಸುದ್ದಿ ತಿಳಿದು ಎ ಉಪ ವಿಭಾಗದ ಡಿಎಸ್ಪಿ ಝೆಂಡೆಕಾರ, ಸ್ಟೇಷನ್ ಬಜಾರ ಪೊಲೀಸ್ ಠಾಣೆಯ ಪ್ರಭಾರಿ ಪಿಐ ಗಂಗಾಧರ, ಶ್ವಾನದಳ, ಬೆರಳಚ್ಚು ತಜ್ಞರು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೆ ಪಕ್ಕದ ಮನೆಯೊಂದರ ಬೀಗ ಮುರಿದು ಕಳ್ಳರು ಕಳ್ಳತನಕ್ಕೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.