ಮಲಕೂಡ: ಅಕ್ರಮ ಮದ್ಯ ಮಾರಾಟ, ಜೂಜಾಟ ನಿಲ್ಲಿಸಿ
ಚಿತ್ತಾಪುರ: ತಾಲೂಕಿನ ಮಲಕೂಡ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟ ನಿರಂತರವಾಗಿ ನಡೆದಿದ್ದು ಅದನ್ನು ನಿಲ್ಲಿಸಬೇಕು ಎಂದು ಗ್ರಾಮದ ಮುಖಂಡ ಹಾಗೂ ಸಮಾಜ ಸೇವಕ ಚಂದ್ರಶೇಖರ ಪಾಟೀಲ್ ಮಲಕೂಡ ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ದಿನನಿತ್ಯ ಅಕ್ರಮ ಮದ್ಯ ಮಾರಾಟ ನಡೆದಿದೆ. ಇದರಿಂದ ಯುವಕರು ಮದ್ಯದ ಹಾವಳಿಗೆ ಬಲಿಯಾಗಿ ತಮ್ಮ ಕುಟುಂಬದಲ್ಲಿ ಕಲಹ ಉಂಟು ಮಾಡಿಕೊಳ್ಳುತ್ತಿದ್ದಾರೆ. ತಂದೆ, ತಾಯಿ, ಹೆಂಡತಿ ಮಕ್ಕಳೊಂದಿಗೆ ದಿನಾಲು ಜಗಳವಾಡಿ ಕುಟುಂಬದಲ್ಲಿ ಅಶಾಂತಿ ವಾತಾವರಣ ನಿರ್ಮಿಸುತ್ತಿದ್ದಾರೆ. ಸಂಬಂಧಿಸಿದ ಅಬಕಾರಿ ಇಲಾಖೆಯವರ ನಿರ್ಲಕ್ಷ್ಯದಿಂದ ಹಳ್ಳಿ ಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರೊಂದಿಗೆ ಕಲಹ ಮಾಡಿ ಅಶಾಂತಿ ಉಂಟಾಗುತ್ತಿದೆ ಹಾಗೂ ಗುಡಿ ಗುಂಡಾರಗಳಲ್ಲಿ ಹಾಗೂ ಹೋಟೆಲ್ಗಳಲ್ಲಿ ಜೂಜಾಟ ಹವ್ಯಾಹತವಾಗಿ ನಡೆದಿದೆ. ಜೂಜಾಟದಿಂದ ಕುಟುಂಬಗಳು ಸಾಲ ಶೂಲದಲ್ಲಿ ಸಿಲುಕಿ ಮನೆ- ಮಠ- ಆಸ್ತಿ ಕಳೆದುಕೊಳ್ಳವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಒಂದು ತಿಂಗಳ ಒಳಗಾಗಿ ಆಕ್ರಮ ಮದ್ಯ ಹಾಗೂ ಜೂಜಾಟ ನಿಲ್ಲಿಸದಿದ್ದರೆ ಸೇಡಂ ಸಹಾಯಕ ಆಯುಕ್ತ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

