ವಿದ್ಯಾರ್ಥಿಗಳಿಂದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸುರಪುರ: ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ 2013-14ನೆ ಸಾಲಿಗಾಗಿ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಸತಿ ನಿಲಯಗಳಿಗೆ ನವೀಕರಣ ಮತ್ತು ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಾರ್ಯಾಲಯದಿಂದ ಅಥವಾ ವಸತಿನಿಲಯಗಳ ಮೇಲ್ವಿಚಾರಕರಿಂದ ಉಚಿತವಾಗಿ ಅರ್ಜಿಗಳನ್ನು ಪಡೆದುಕೊಂಡು ಭರ್ತಿ ಮಾಡಿ ಸಲ್ಲಿಸಬೇಕು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ (5 ರಿಂದ 10ನೇ ತರಗತಿ) ವ್ಯಾಸಂಗ ಮಾಡುತಿರುವ ಪ್ರವರ್ಗ-1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಯಾವುದೇ ಆದಾಯದ ಮಿತಿ ಇಲ್ಲ. 2-ಎ, 2-ಬಿ, 3-ಎ, 3-ಬಿ ಪಂಗಡದ ವಿದ್ಯಾರ್ಥಿಗಳಿಗೆ ರು. 15 ಸಾವಿರ ವಾರ್ಷಿಕ ಆದಾಯ ಮೀರಿರಬಾರದು. ಅರ್ಜಿಗಳನ್ನು ಜೂ. 6ರ ಒಳಗಾಗಿ ಸಂಬಂಧಿಸಿದ ಕಾರ್ಯಾಲಯಕ್ಕೆ ಸಲ್ಲಿಸಬೇಕು. ನವೀಕರಣ ಬಯಸುವ ವಿದ್ಯಾರ್ಥಿಗಳು ಜೂನ್ 1ರ ಒಳಗಾಗಿ ಸಂಬಂಧಿಸಿದ ವಸತಿ ನಿಲಗಳ ಮೇಲ್ವಿಚಾರಕರಲ್ಲಿ ಅರ್ಜಿ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ವಸತಿ ನಿಲಯ: ಮೆ.ಪೂ ಬಾಲಕರ ವಸತಿ ನಿಲಯ ಸುರಪುರ, ವಜ್ಜಲ್, ರಾಜನಕೋಳೂರ, ಕೊಡೆಕಲ್, ನಾರಾಯಣಪುರ, ಹೆಗ್ಗಣದೊಡ್ಡಿ, ನಗನೂರ, ಮಲ್ಲಾ ಬಿ, ಯಾಳಗಿ, ಮುದನೂರ, ಮೆ.ಪೂ ಬಾಲಕಿಯರ ವಸತಿ ನಿಲಯ ಸುರಪುರ, ಹುಣಸಗಿ, ಕೆಂಭಾವಿ, ದೇವಾಪೂರ.
ಸಮಾಜಕಲ್ಯಾಣ ಇಲಾಖೆಯ ವಸತಿ ನಿಲಯಗಳು: ಸರ್ಕಾರಿ ಬಾಲಕರ ವಸತಿ ನಿಲಯ ರಂಗಂಪೇಟ, ಕಕ್ಕೇರಾ, ಗೆದ್ದಲಮರಿ, ನಾರಾಯಣಪುರ, ಹುಣಸಗಿ, ಬೈಚಬಾಳ, ಕೆಂಬಾವಿ, ಪರಿಶಿಷ್ಟ ಜಾತಿ ಬಾಲಕಿಯರ ವಸತಿ ನಿಲಯ ಸುರಪುರ, ಪರಿಶಿಷ್ಟ ಪಂಗಡ ಬಾಲಕಿಯರ ವಸತಿ ನಿಲಯ ಸುರಪುರ ಈ ವಸತಿ ನಿಲಯಗಳಿಗೆ ವಿದ್ಯಾರ್ಥಿಗಳು ನಿಗದಿತ ಸಮಯದ ಒಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

