ನಮೋಶಿ ಪಕ್ಷಾಂತರ ವದಂತಿಗೆ ತೆರೆ
ಗುಲ್ಬರ್ಗ: ಜೆಡಿಎಸ್‌ನಿಂದ ಗುಲ್ಬರ್ಗ ದಕ್ಷಿಣ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿರುವ ಶಶೀಲ್ ನಮೋಶಿ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳುವ ಬಗ್ಗೆ ತಮ್ಮ ಬಳಿ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ನಮೋಶಿ ಪಕ್ಷಾಂತರದ ಕುರಿತಂತೆ ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಗುಲ್ಬರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನಿಗೆ ಉತ್ತರಿಸಿದ ಅವರು, ನಮೋಶಿ ಮತ್ತೆ ಬಿಜೆಪಿಗೆ ಬರುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಅವರನ್ನು ಮತ್ತೆ ಪಕ್ಷಕ್ಕೆ ಬರಮಾಡಿಕೊಳ್ಳುವ ಬಗ್ಗೆ ಅಂತಿಮ ನಿರ್ಣಯ ಗುಲ್ಬರ್ಗ ಜಿಲ್ಲೆಯ ಮುಖಂಡರಿಗೆ ಬಿಟ್ಟಿದೆ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

