ದೇಣಿಗೆ ಹಾವಳಿ ತಡೆಗೆ ಎಐಡಿಎಸ್‌ಒ ಆಗ್ರಹ
ಗುಲ್ಬರ್ಗ: ಮಾನವನಲ್ಲಿ ಉತ್ತಮ ಚಾರಿತ್ರ್ಯ ನಿರ್ಮಿಸಿ ಸಮಾಜವನ್ನು ಪ್ರಗತಿಯ ಕಡೆಗೆ ಕೊಂಡೊಯ್ಯುವ ಶಿಕ್ಷಣವು ಇಂದು ಖಾಸಗೀಕರಣ ನೀತಿಗಳಿಂದಾಗಿ ಉಳ್ಳವರ ಸ್ವತ್ತಾಗಿದೆ. ಇದನ್ನು ತಡೆಗಟ್ಟಲು ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದಿರುವುದನ್ನು ಆಲ್ ಇಂಡಿಯಾ ಡೆಮೊಕ್ರೆಟಿಕ್ ಸ್ಟೂಡೆಂಟ್‌ಆರ್ಗನೈಸೇಷನ್ (ಎಐಡಿಎಸ್‌ಒ) ಜಿಲ್ಲಾ ಸಮಿತಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಜಗನ್ನಾಥ ಎಸ್.ಎಚ್ ತಿಳಿಸಿದ್ದಾರೆ. ಈ ಸಂಬಂಧ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಥಮಿಕ ಶಿಕ್ಷಣವಾದರೂ ಉಚಿತವಾಗಿ ಕೊಡಬೇಕು ಆದರೆ ಎಲ್‌ಕೆಜಿ-ಯುಕೆಜಿಯಿಂದ ಎಲ್ಲ ಹಂತದ ಶಿಕ್ಷಣವು ಲಕ್ಷಾನುಗಟ್ಟಲೆ ಡೊನೇಷನ್‌ಗೆ ಮಾರಾಟವಾಗುತ್ತಿದೆ. ಹಣವಿದ್ದರೆ ಶಿಕ್ಷಣ ಇಲ್ಲವಾದರೆ ಅನಕ್ಷರತೆಯೇ ಗತಿಯೆಂದು ಇಂದಿನ ಶಿಕ್ಷಣ ವ್ಯವಸ್ಥೆಯು ಹೇಳುತ್ತಿದೆ.
ಬೇಜವಾಬ್ದಾರಿಯನ್ನು ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದೆ. ಡೊನೇಷನ್ ಹಾವಳಿ ವಿರುದ್ಧ ಸಮಿತಿ ರಚಿಸಿ,ಡೊನೇಷನ್ ತಡೆಗಟ್ಟಲು ಕ್ರಮತೆಗೆದುಕೊಳ್ಳಬೇಕು. ತಡೆಗಟ್ಟಲು ಯಾವುದೇ ಕ್ರಮ ಕೈಗೊಳ್ಳದೆ ಇದ್ದರೆ ಸಂಘಟನೆಯು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

