ಗುಲ್ಬರ್ಗಾ

ಸಿಇಟಿ ತಡೆಯಲು ಒತ್ತಾಯ

Published On :

ಗುಲ್ಬರ್ಗ: ಸಂವಿಧಾನದ 371(ಜೆ) ವಿಧಿ ಅನುಷ್ಠಾನಗೊಳ್ಳುವವರೆಗೆ ಮೆಡಿಕಲ್ ಮತ್ತು ಎಂಜಿನಿಯರಿಂಗ್ಗಳ ಪ್ರವೇಶದ ಸಲುವಾಗಿ ನಡೆಯುವ ಸಿಇಟಿ ತಡೆಯುವ ಮೂಲಕ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವೈಜನಾಥ ಪಾಟೀಲ್ ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಅವರು,  ಹಿಂದಿನ ಸರ್ಕಾರ ನಿಯಮಾವಳಿ ರೂಪಿಸುವಲ್ಲಿ ವಿಳಂಬ ಮಾಡಿ 371ನೇ ವಿಧಿ ಅನುಷ್ಠಾನಗೊಳ್ಳುವವರೆಗೆ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲು ಆದೇಶ ನೀಡಿತ್ತು. ಆದರೆ, ಇನ್ನೂ ಕೆಲವು ವಿಭಾಗಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ. ಕೂಡಲೇ ಅವುಗಳನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
ಜೂ.6ರಿಂದ ಸೇನಾ ಭರ್ತಿ ರ್ಯಾಲಿ
ಗುಲ್ಬರ್ಗ: ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಜೂನ್ 6 ರಿಂದ 13ರವರೆಗೆ ಭಾರತೀಯ ಸೇನಾ ಪಡೆಗೆ ಸೇರಲಿಚ್ಚಿಸುವ ಯುವಕರಿಗಾಗಿ ಸೇನಾ ಭರ್ತಿ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಕ್ಲರ್ಕ್, ಸ್ಟೋರ್ ಕೀಪರ್ಸ ಟೆಕ್ನಿಕಲ್, ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ನರ್ಸಿಂಗ್ ಅಸಿಸ್ಟೆಂಟ್ ಹಾಗೂ ಸೋಲ್ಜರ್ ಡ್ರೆಸ್ಸರ್ ಮತ್ತು ಸೋಲ್ಜರ್ ಟ್ರೆಡ್ಮೆನ್ನ ವಿವಿಧ ಹುದ್ದೆಗಳ ಭರ್ತಿಗೆ ರ್ಯಾಲಿಯನ್ನು ಆಯೋಜಿಸಲಾಗಿದೆ. ಸೇನಾ ನೇಮಕಾತಿಯು ಅಖಿಲ ಭಾರತ ಮಟ್ಟದಲ್ಲಿ ನಡೆಯುವುದರಿಂದ ಅಭ್ಯರ್ಥಿಗಳು ಇಂಗ್ಲಿಷ್ ಅಥವಾ ಹಿಂದಿಯಲ್ಲಿರುವ ದಾಖಲಾತಿಗಳನ್ನು ತರಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-25599290 ಸಂಪರ್ಕಿಸುವಂತೆ ಬೆಳಗಾವಿಯ ಆರ್ಮಿ ರಿಕ್ರ್ಯೂಟಿಂಗ್ ಆಫಿಸರ್ ಕೋರಿದ್ದಾರೆ.
'ಅಜಯಸಿಂಗ್ ಸಚಿವರಾಗಲಿ'
ಜೇವರ್ಗಿ: ಅಭಿವೃದ್ಧಿ ದೃಷ್ಟಿಕೋನ ಹೊಂದಿರುವ ಶಾಸಕ ಡಾ.ಅಜಯಸಿಂಗ್ ಅವರನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಕಲ್ಪಿಸಬೇಕು ಎಂದು ತಾಲೂಕು ಕಾಂಗ್ರೆಸ್ ಎಸ್ಸಿ, ಎಸ್ಟಿ ಸಂಘದ ಅಧ್ಯಕ್ಷ ಧನ್ನಕರ್ ಆಗ್ರಹಿಸಿದ್ದಾರೆ. ಡಾ. ಅಜಯಸಿಂಗ್ ಕಳೆದ ದಶಕದಿಂದ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಿದ್ದಾರೆ. ದೀನ, ದಲಿತ, ಹಿಂದುಳಿದ, ಅಲ್ಪಸಂಖ್ಯಾತರು ಸೇರಿದಂತೆ ರೈತಪರ, ಜನಪರ ಸಮಸ್ಯೆಗಳಿಗೆ ಸ್ಪಂದಿಸುತ್ತ ಜನಾನುರಾಗಿಯಾಗಿ ಅತ್ಯಧಿಕ ಮತಗಳಿಂದ ಜೇವರ್ಗಿ ಕ್ಷೇತ್ರದಲ್ಲಿ ಚುನಾಯಿತರಾಗಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.