ಇಂದು ವಧು-ವರರ ಸಮಾವೇಶ, ಸನ್ಮಾನ
ಗುಲ್ಬರ್ಗ: ಆದ್ಯ ವಚನಕಾರ ದೇವರ ದಾಸಮಯ್ಯ ಜಯಂತ್ಯುತ್ಸವ ಮತ್ತು ವಧು ವರರ ಸಮಾವೇಶ ಮೇ 25 ರಂದು ಬೆಳಗ್ಗೆ 10ಕ್ಕೆ ಝಫರಬಾದ್ ಕ್ರಾಸ್ನಲ್ಲಿರುವ ದೇವರದಾಸಿಮಯ್ಯ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಸನ್ಮಾನಿಸಲಾಗುವುದು. ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿವಿಧ ಮಠಾಧೀಶರು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ದೇವಾಂಗ ಸಮಾಜ ತಿಳಿಸಿದೆ.
ಮುಂಗಡ ಟಿಕೆಟ್ ಕೌಂಟರ್ ಆರಂಭ
ಗುಲ್ಬರ್ಗ: ನಗರದ ಜೇವರ್ಗಿ ಕ್ರಾಸ್ನಲ್ಲಿರುವ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಬಳಿ ಸಾರ್ವಜನಿಕರಿಗೆ, ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಟಿಕೆಟ್ ವಿತರಣೆ ಕೌಂಟರ್ ಆರಂಭಿಸಲಾಗಿದೆ. ಇದೇ ಕೌಂಟರ್ನಲ್ಲಿ ಮಾಸಿಕ ಪಾಸ್ ಮತ್ತು ದೈನಂದಿನ ಪಾಸ್ಗಳನ್ನು ಸಹ ವಿತರಣೆ ಮಾಡಲಾಗುವುದು. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಈ ವ್ಯವಸ್ಥೆಯ ಲಾಭ ಪಡೆಯುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಕೋರಿದ್ದಾರೆ.
'ಗುತ್ತಿಗೆ' ನೇಮಕಾತಿ ಪಟ್ಟಿ ಪ್ರಕಟ
ಗುಲ್ಬರ್ಗ: ಎಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುವರ್ಣ ಚೈತನ್ಯ ಶಾಲಾ ಆರೋಗ್ಯ ಕಾರ್ಯಕ್ರಮದಡಿ ಗುತ್ತೆಗೆ ಆಧಾರದ ಮೇಲೆ ಎಂಬಿಬಿಎಸ್ ವೈದ್ಯರ, ಬಿಎಎಂಎಸ್ ವೈದರ ಮತ್ತು ಶುಶ್ರೂಷಕಿಯರ (ಮಹಿಳಾ) ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿಯ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ತಾತ್ಕಾಲಿಕ ನೇಮಕಾತಿ ಪಟ್ಟಿಯಲ್ಲಿ ಏನಾದರೂ ಆಕ್ಷೇಪಣೆಗಳಿದ್ದರೆ ಗುಲ್ಬರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಲಿಖಿತ ರೂಪದಲ್ಲಿ ಅರ್ಜಿಯನ್ನು ಮೇ 25 ರಿಂದ 28ರವರೆಗೆ ಮಧ್ಯಾಹ್ನ 1.30 ಗಂಟೆಯೊಳಗೆ ಸಲ್ಲಿಸುವಂತೆ ಕೋರಲಾಗಿದೆ.
ಬದ್ದೇಪಲ್ಲಿ ತಾಯಮ್ಮದೇವಿ ಜಾತ್ರೆ
ಗುಲ್ಬರ್ಗ: ಬದ್ದೆಪಲ್ಲಿ ಗ್ರಾಮದಲ್ಲಿ ತಾಯಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಿತು. ಸುಮಾರು ಒಂದು ಕಿಮೀ ಅಂತರದಲ್ಲಿ ಬಾಜಭಜಂತ್ರಿ ಹಾಗೂ ಡೊಳ್ಳು ಕುಣಿತದೊಂದಿಗೆ ವಿಶೇಷ ಪೂಜೆ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ದೇವಿಯ ಮೂರ್ತಿಯನ್ನು ಗರ್ಭಗುಡಿಯ ಮಂದಿರದ ಮುಂಭಾಗದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಸಂಜೆ ಗ್ರಾಮಸ್ಥರು ಸೇರಿದಂತೆ ಸುತ್ತಲಿನ ನೂರಾರು ಭಕ್ತರು ಜ್ಯೋತಿ ಹಾಗೂ ಕುಂಬವನ್ನು ತಂದು ದೇವಿಗೆ ಅರ್ಪಿಸಿದರು. ಇಷ್ಟಕಾರ್ಯ ಸಿದ್ದಿಯಾದ ಅನೇಕ ಭಕ್ತರು ದೇವಿಗೆ ಕಾಣಿಕೆಯನ್ನು ಸಲ್ಲಿಸಿದರು. ಬರಗಾಲದ ಹಿನ್ನೆಲೆಯಲ್ಲಿ ಹೊಟ್ಟೆ ಪಾಡಿಗಾಗಿ ಹೈದ್ರಾಬಾದ್, ಬೆಂಗಳೂರು, ಮುಂಬೈದಂತಹ ಮಹಾನಗರಗಳಿಗೆ ಗುಳೆ ಹೋಗಿದ್ದ ಗ್ರಾಮಸ್ಥರು ಜಾತ್ರೆಗೆ ಆಗಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

