'ಹೈ-ಕ ಪ್ರಗತಿಗೆ ಕೇಂದ್ರದ ನಿರ್ದೇಶನ ಅಗತ್ಯ'
ಕ.ಪ್ರ. ವಾರ್ತೆ, ಗುಲ್ಬರ್ಗ, ಮೇ 24
ಹೈ-ಕ ಪ್ರದೇಶ ರಚನಾತ್ಮಕ ಪ್ರಗತಿಗೆ ಕೇಂದ್ರ ಸರ್ಕಾರ ಮಂಡಿಸಿರುವ ಸಂವಿಧಾನದ 371(ಜೆ) ವಿಧಿಗೆ ರಾಜ್ಯ ಸರ್ಕಾರ ಕಾಲಮಿತಿಯಲ್ಲಿ ನಿಯಮಗಳನ್ನು ರೂಪಿಸಲು ಕೇಂದ್ರ ಸರ್ಕಾರದಿಂದ ನಿರ್ದೇಶನ ನೀಡಬೇಕು ಎಂದು ಹೈ-ಕ ಪ್ರದೇಶಗಳ ಹೋರಾಟಗಳ ಸಮನ್ವಯ ಸಮಿತಿ ಮನವಿ ಮಾಡಿದೆ.
ಈ ಕುರಿತು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಧವಾರ ಮನವಿ ಸಲ್ಲಿಸಿರುವ ಸಮಿತಿ ಮುಖಂಡರು, ಈ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 371ನೇ ವಿಧಿ ತಿದ್ದುಪಡಿಗೆ ಮುತುವರ್ಜಿ ವಹಿಸಿ ಸಂಸತ್ತಿನಲ್ಲಿ ಮಸೂದೆ ಅಂಗೀಕಾರ ಮಂಡಿಸಿ, ಈ ಮೂಲಕ ಹೈ-ಕ ಅಭಿವೃದ್ಧಿಗೆ ಪೂರಕವಾಗಲು ಸಿದ್ಧವಿರುವಾಗ ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಅನುಷ್ಠಾನಗೊಳಿಸದೆ ವಿಳಂಬ ನೀತಿ ಅನುಸರಿಸಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹೊಸದಾಗಿ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮದೇ ಪಕ್ಷದ್ದಾಗಿದ್ದು, ನೂತನ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತಂದು ವಿಶೇಷ ಸ್ಥಾನಮಾನ ಕಲ್ಪಿಸುವ 371(ಜೆ) ವಿಧಿಗೆ ಕಾಲಮಿತಿಯಲ್ಲಿ ನಿಯಮಾವಳಿಗಳನ್ನು ರೂಪಿಸುವಂತೆ ಸೂಚಿಸಬೇಕು.
ಈ ಮೂಲಕ ಹೈ-ಕ ಜನರಿಗೆ ಅನುಕೂಲ ಮಾಡಿಕೊಡಲು ಮುತುವರ್ಜಿ ವಹಿಸಬೇಕು ಎಂದು ಖರ್ಗೆ ಅವರಲ್ಲಿ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ನೇತೃತ್ವದ ನಿಯೋಗ ಮನವಿ ಮಾಡಿತು. ಸಮಿತಿ ಸದಸ್ಯರಾದ ಶಿವಶರಣಪ್ಪ ಖಣದಾಳ, ಲಿಂಗರಾಜ ಸಿರಗಾಪುರ, ಹಾಜಿಸಾಬ್ ಬಾಗವಾನ್, ಅಮೃತ ಪಾಟೀಲ್, ನಾಗಲಿಂಗಯ್ಯ ಮಠಪತಿ, ವಿ.ಎಚ್. ವಾಲಿಕರ್, ಗೋಪಾಲ್ ನಾಟೀಕಾರ, ಶಿವಲಿಂಗಪ್ಪ ಬಂಡಕ, ಮಿರೋಜೋದ್ದೀನ್, ನಿಂಗಣ್ಣ ಉದನೂರ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

