ಗುಲ್ಬರ್ಗಾ

28ರಂದು ಪ್ರಶಸ್ತಿ ಪ್ರದಾನ

Published On :

ಗುಲ್ಬರ್ಗ: ಇತ್ತೀಚಿಗೆ ಜರುಗಿದ 10ನೇ ತರಗತಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಈ ಭಾಗದ ಗುಲ್ಬರ್ಗ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ದಿಶೆಯಲ್ಲಿ ಗುಣಾಗ್ರಣಿ ಪ್ರಶಸ್ತಿ ನೀಡುವ ಮೂಲಕ ಅವರಲ್ಲಿ ಮಾತೃ ಭಾಷಾಭಿಮಾನ, ನಾಡು ನುಡಿಯ ಬಗ್ಗೆ ಗೌರವ ಹೆಚ್ಚಿಸಲು ವಿಶ್ವಜ್ಯೋತಿ ಪ್ರತಿಷ್ಠಾನ ಮುಂದಾಗಿದೆ. ಮೇ 28ರಂದು ಬೆಳಗ್ಗೆ 10.30ಕ್ಕೆ ಸೂಪರ್ ಮಾರ್ಕೆಟಿನಲ್ಲಿರುವ ಕೋಸಗಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದ್ದು, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ಹಾಗೂ ಗುಲಾಬಿ ಹೂವು ನೀಡುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ಪ್ರತಿಷ್ಠಾನ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುಲಫಲ ಮಠದ ಮಹಾಂತ ಶಿವಾಚಾರ್ಯರು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಜೆ.ಎಸ್. ಪಾಟೀಲ್, ಗುಲ್ಬರ್ಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಟಿ. ಜಯರಾಮ, ಜೇವರ್ಗಿ ತಾಲೂಕು ಕಸಾಪ ಅಧ್ಯಕ್ಷ ಶಿವಕವಿ ಹಿರೇಮಠ ಜೋಗೂರ, ಚಿಂಚೋಳಿಯ ಸಿ.ಬಿ. ಪಾಟೀಲ್ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ವಿಜಯಲಕ್ಷ್ಮಿ ಕೋಸಗಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಗುಲ್ಬರ್ಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಲೆಕ್ಕ ಅಧೀಕ್ಷಕ ಲಿಂಗರಾಜ ಬಿರಾದಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಈಗಾಗಲೇ ಸುಮಾರು 75 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡುವ ಗುರಿ ಹೊಂದಲಾಗಿದೆ. ವಿವರಕ್ಕೆ ಮೊಬೈಲ್- 98865 60869, 98803 49025ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.