ಗುಲ್ಬರ್ಗಾ

ಇಂದು ಪೂರ್ವಭಾವಿ ಸಭೆ

Published On :

ಗುಲ್ಬರ್ಗ: ಮಹಾದೇವಿ ಅಕ್ಕಗಳ 6ನೇ ಸಮ್ಮೇಳನ ಹಮ್ಮಿಕೊಳ್ಳುವ ಕುರಿತು ಪೂರ್ವಭಾವಿ ಸಭೆಯು ಮೇ 26ರಂದು ಸಂಜೆ 6 ಗಂಟೆಗೆ ಜಯನಗರದ ಅನುಭವ ಮಂಟಪದಲ್ಲಿ ಕರೆಯಲಾಗಿದೆ. ಜೂನ್ ಕೊನೆಯ ವಾರದಲ್ಲಿ 6ನೇ ಸಮ್ಮೇಳನ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಕ್ಕನ ಬಳಗದ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ತಿಳಿಸಿದ್ದಾರೆ. ಈ ಸಮ್ಮೇಳನ ಯಶಸಿಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಪೂರ್ವಭಾವಿಯಾಗಿ ಸಭೆ ಕರೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಮಶಾನ ಭೂಮಿಗೆ ಡಿಸಿಗೆ ಮನವಿ
ಗುಲ್ಬರ್ಗ: ಚಿತ್ತಾಪುರ ತಾಲೂಕಿನ ವಚ್ಚಾ ಗ್ರಾಮದಲ್ಲಿ ಎಸ್‌ಸಿ ವಡ್ಡರ ಜನರಿಗಾಗಿ ಸ್ಮಶಾನ ಭೂಮಿ ಮಂಜೂರು ಮಾಡಲು ಜಿಲ್ಲಾಧಿಕಾರಿಗೆ ಸಿದ್ದಣ ಜಿ. ಕನ್ನಡಗಿ ಮನವಿ ಮಾಡಿದ್ದಾರೆ. ಈ ಗ್ರಾಮದಲ್ಲಿ ವಡ್ಡರ ಜನಾಂಗದ ಸಾಕಷ್ಟು ಜನರು ವಾಸಿಸುತ್ತಿದ್ದು, ಹೆಚ್ಚಿನ ಜನರಿಗೆ ಸ್ವಂತ ಕೃಷಿ ಭೂಮಿ ಇಲ್ಲದೆ ಬದುಕುತಿದ್ದಾರೆ. ಕೂಲಿ ಹಾಗೂ ಇನ್ನಿತರ ಕೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಈ ಜನಾಂಗದ ಯಾವುದೇ ವ್ಯಕ್ತಿ ಮೃತಪಟ್ಟರೆ ಅವರಿಗೆ ಸ್ಮಶಾನ ಭೂಮಿಗೊಸ್ಕರ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಗ್ರಾಮಕ್ಕೆ ಹತ್ತಿರದಲ್ಲಿರುವ ಸರ್ಕಾರಿ ಜಮೀನಿನಲ್ಲಿ ಸ್ಮಶಾನ ಭೂಮಿ ಮಂಜೂರು ಮಾಡಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಪೆಂಟಾರೆಡ್ಡಿ ಸೇವಾದಳಕ್ಕೆ ಆಯ್ಕೆ
ಗುಲ್ಬರ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ ಭೀಮಾಶಂಕರ ವಿ.ಎಚ್ ಅವರ ನಿರ್ದೇಶನದಂತೆ ಪೆಂಟಾರೆಡ್ಡಿ ಅವರನ್ನು ಗುಲ್ಬರ್ಗ ಕಾಂಗ್ರೆಸ್ ಸೇವಾದಳಕ್ಕೆ ಕಾರ್ಯಕಾರಿ ಸದಸ್ಯರಾಗಿ ನೇಮಕ ಮಾಡಲಾಗಿದೆ ಎಂದು ಹಣಮಂತರಾವ ಎಸ್. ಜವಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.