ಖಾತೆಯಲ್ಲಿ ಹೈ-ಕ.ಕ್ಕೆ ವಂಚನೆ
ಕನ್ನಡಪ್ರಭ ವಾರ್ತೆ , ಚಿತ್ತಾಪುರ , ಮೇ 25
ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟದಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಶಾಸಕರಿಗೆ ನೀಡಿದ ಸಚಿವ ಸಂಪುಟದಲ್ಲಿ ಪ್ರಮುಖ ಇಲಾಖೆ ಖಾತೆ ನೀಡುವಲ್ಲಿ ವಂಚಿತರನ್ನಾಗಿ ಮಾಡಲಾಗಿದೆ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ಆರೋಪಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಹೈ-ಕ ಪ್ರದೇಶಕ್ಕೆ 371ನೇ (ಜೆ) ವಿಧಿ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷ್ಯ ಭಾವನೆ ತಾಳಿದ್ದಾರೆ ಎಂದು ಆರೋಪಿಸಿದ್ದಾರೆ.
ಹೈ-ಕ ಸಚಿವರಿಗೆ ವಕ್ಫ, ವೈದ್ಯಕೀಯ ಶಿಕ್ಷಣ, ಜವಳಿ ಸೇರಿದಂತೆ ಎಲ್ಲ ಖಾತೆಗಳು ಪ್ರಮುಖ ಹೊಂದಿಲ್ಲ. ಇದರಿಂದಾಗಿ ಹೈ-ಕ ಪ್ರದೇಶ ಅಭಿವೃದ್ಧಿ ಹೊಂದಲು ಗಗನ ಕುಸುಮವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಸಿಎಂ ತವರೂರು ಮೈಸೂರು ಜಿಲ್ಲೆಗೆ ಕಂದಾಯ, ಲೋಕೋಪಯೋಗಿ ಹಾಗೂ ಇತರ ಜಿಲ್ಲೆಗೆ ವಸತಿ, ಜಲಸಂಪನ್ಮೂಲನಂತಹ ಪ್ರಮುಖ ಖಾತೆಗಳು ನೀಡಲಾಗಿದೆ. ಇತರ ಜಿಲ್ಲೆಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ನಿಂದ ಶಾಸಕರಾಗಿ ಆಯ್ಕೆಯಾದವರ ಸಂಖ್ಯೆ ಕಡಿಮೆಯಿದೆ. ಹೈ- ಕ ಪ್ರದೇಶದಲ್ಲಿ 22ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದಾರೆ. ಹೀಗಿದ್ದಾಗ ಮುಖ್ಯಮಂತ್ರಿಯವರು ತಾರತಮ್ಯ ಮನೋಭಾವನೆ ಬಿಟ್ಟು ಹೈ- ಕ ಸಚಿವರಿಗೆ ಪ್ರಮುಖ ಖಾತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕೇಂದ್ರದ 371ನೇ (ಜೆ) ವಿಧಿ ತಿದ್ದುಪಡಿ ಸಕಾರಗೊಳಿಸಲು ವಿಶೇಷ ಆಸಕ್ತಿ ತೋರಿಸಿ ಹೆಚ್ಚಿನ ಅನುದಾನ ಕಲ್ಪಿಸಬೇಕು. ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಅವರ ಇಚ್ಛೆಯಂತೆ ರಾಜ್ಯ ಸಚಿವ ಸಂಪುಟದಲ್ಲಿ ಯುವಕರಿಗೆ ಆದ್ಯತೆ ನೀಡಲು ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

