ಗುಲ್ಬರ್ಗಾ

ನದಿ ಪಾತ್ರದ ಮರಳು ಸಾಗಾಣಿಕೆ ನಿಷೇಧ: ಡಿಸಿ

Published On :

ಗುಲ್ಬರ್ಗ: ನದಿ ಪಾತ್ರದ ಮರಳು ಸಾಗಾಣಿಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಮರಳು ಸಾಗಾಣಿಕೆ ಕಂಡು ಬಂದರೆ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಪ್ರಸನ್ನಕುಮಾರ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯ ನದಿ ಮತ್ತು ಹಳ್ಳದ ಪಾತ್ರಗಳಲ್ಲಿರುವ ಅತ್ಯಮೂಲ್ಯ ಮರಳನ್ನು ಕಾನೂನು ಬಾಹಿರವಾಗಿ ಸಾಗಣೆ ಮಾಡುತ್ತಿರುವುದು ಕಂಡುಬಂದಿದೆ. ಇದಕ್ಕಾಗಿ ನದಿಪಾತ್ರಗಳಲ್ಲಿ ಮರಳನ್ನು ಅಗೆಯಲು ಜೆಸಿಬಿ ಅಥವಾ ಇನ್ನಾವುದೇ ಭಾರೀ ಪ್ರಮಾಣದಲ್ಲಿ ಭೂಮಿಯನ್ನು ಅಗೆಯುವ ಯಂತ್ರಗಳ ಬಳಕೆ ಮಾಡಲಾಗುತ್ತಿದೆ. ಇದು ಕಾನೂನು ಬಾಹಿರವಾಗಿದ್ದು, ನದಿ ಪಾತ್ರಗಳಲ್ಲಿ ಜೆಸಿಬಿ ಅಥವಾ ಇನ್ನಾವುದೇ ಭಾರೀ ಪ್ರಮಾಣದ ಅಗೆಯುವ ಯಂತ್ರಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇಂಥಹ ಯಂತ್ರಗಳು ನದಿ ಪಾತ್ರಗಳಲ್ಲಿ ಕಂಡುಬಂದರೆ ಅವುಗಳನ್ನು ಜಪ್ತಿ ಮಾಡಿ ಮಾಲೀಕರ ವಿರುದ್ಧ ಮತ್ತು ಬಳಕೆದಾರರ ವಿರುದ್ಧ ಕಾನೂನಿನ ರೀತ್ಯ ನಿರ್ದಾಕ್ಷಿಣ್ಯವಾಗಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ರಾಜ್ಯದಾದ್ಯಂತ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಬರಗಾಲದ ಕರಾಳ ಛಾಯೆ ಆವರಿಸಿದೆ. ಜಿಲ್ಲೆಯಲ್ಲಿ ಜಾನುವಾರುಗಳಿಗೆ ಸಮರ್ಪಕವಾಗಿ ಮೇವಿನ ದಾಸ್ತಾನಿದೆ. ಇದನ್ನು ಬೇರೆ ರಾಜ್ಯಗಳಿಗೆ ಸಾಗಿಸುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.