ಗುಲ್ಬರ್ಗಾ

ಇಂದು ವಿನಾಯಕ ಮೂರ್ತಿ ಪ್ರತಿಷ್ಠಾಪನೆ

Published On :

ಜೇವರ್ಗಿ: ಪಟ್ಟಣದ ಹೊರ ವಲಯದಲ್ಲಿರುವ ಸಂಪತ್ ಲಕ್ಷ್ಮೀ ದೇವಸ್ಥಾನದಲ್ಲಿ ಮೇ 28ರಂದು ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನದ ಜೀರ್ಣೋದ್ಧಾರದ ಅಡಿಗಲ್ಲು ಸಮಾರಂಭ ನೆರವೇರಲಿದೆ.
ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಮಂಗಳವಾರ ಬೆಳಗ್ಗೆ 8ಕ್ಕೆ ರಿಲಯನ್ಸ್ ಪೆಟ್ರೋಲ್ ಬಂಕ್ನಿಂದ ಸಂಪತ್ ಲಕ್ಷ್ಮೀ ದೇವಸ್ಥಾನದವರೆಗೆ ಗಣೇಶ ಮೂರ್ತಿಯ ಭವ್ಯ ಮೆರವಣಿಗೆ ನಡೆಯಲಿದೆ. ನಂತರ ನಡೆಯುವ ಕಾರ್ಯಕ್ರಮದಲ್ಲಿ ಸೊನ್ನದ ಶಿವಾನಂದ ಮಹಾಸ್ವಾಮೀಜಿ, ಕನಕಗುರು ಪೀಠದ ಲಿಂಗಾನಂದ ಶರಣರು ಹಾಗೂ ದೇವಸ್ಥಾನದ ಅರ್ಚಕ ಮಿನಿನಾಥ ಮಹಾರಾಜರು ಸಾನ್ನಿಧ್ಯದಲ್ಲಿ ಶಾಸಕ ಡಾ. ಅಜಯಸಿಂಗ್ ಮಂದಿರ ಜೀರ್ಣೋದ್ದಾರದ ಅಡಿಗಲ್ಲು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ತಾಪಂ ಅಧ್ಯಕ್ಷ ಶರಣಗೌಡ ಹರನೂರ, ಕೇದಾರಲಿಂಗಯ್ಯ ಹಿರೇಮಠ, ಮಲ್ಲಿನಾಥಗೌಡ ಪಾಟೀಲ್ ಯಲಗೋಡ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.