ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಗುಲ್ಬರ್ಗ: ನಗರದ ಬಸವ ಚೇತನ ಹಾಗೂ ಮಾದಲಾಂಬಿಕಾ ವಿದ್ಯಾರ್ಥಿ ವಿದ್ಯಾರ್ಥಿನಿಯರ ಪ್ರಸಾದ ನಿಲಯಗಳ ಪ್ರವೇಶಕ್ಕಾಗಿ ಜೂನ್ 30ರಂದು ಸಂದರ್ಶನ ನಡೆಯಲಿದೆ. ಕಳೆದ 8 ವರ್ಷಗಳಿಂದ ಈ ಸಂಸ್ಥೆ ನಡೆಯುತ್ತಿದ್ದು, ಬಡ ಮತ್ತು ಪ್ರತಿಭಾವಂತ ಉತ್ತಮ ಚಾರಿತ್ರ್ಯವುಳ್ಳ ಪಿಯುಸಿ, ಡಿಪ್ಲೋಮಾ, ಬಿಎ, ಬಿಎಸ್ಸಿ, ಬಿಸಿಎ, ಬಿಕಾಂ, ಬಿಬಿಎಂ, ಐಟಿಐ, ಡಿಇಡಿ, ನರ್ಸಿಂಗ್, ಬಿಇ, ಎಂಇ, ಎಂಬಿಬಿಎಸ್, ಎಂಎಸ್, ಎಂಡಿ, ಸ್ನಾತಕೋತ್ತರ ಪದವಿಗಳ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಹರು. ಗುಲ್ಬರ್ಗ, ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು ಮತ್ತು ಕರ್ನಾಟಕದ ಯಾವುದೇ ಜಿಲ್ಲೆಗಳಿಂದ ಬಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗಾಗಿ ಬಸವ ಸೇವಾ ಸಂಸ್ಥೆಯ ಕಾರ್ಯಾಲಯದಲ್ಲಿ ಮೇ 30 ರಂದು ಬೆಳಗ್ಗೆ 10ಗಂಟೆಯಿಂದ ಸಂಜೆ 5ರವರೆಗೆ ಸಂದರ್ಶನ ನಡೆಯಲಿದೆ. ಸಂದರ್ಶನಕ್ಕೆ ಪಾಲಕರೊಂದಿಗೆ ವಿದ್ಯಾರ್ಥಿಗಳು ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ 9900836446, 9632294053ಗೆ ಸಂಪರ್ಕಿಸಲು ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಬಿ.ಎಚ್. ಪುರಂತಗಿ, ಕಾರ್ಯದರ್ಶಿ ಎಂ.ಬಿ. ಅಂಬಲಗಿ ಕೋರಿದ್ದಾರೆ.
ಅವಧಿ ವಿಸ್ತರಣೆ
ಗುಲ್ಬರ್ಗ: ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ 11 ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಆನ್ಲೈನ್ ಇಂಟರ್ಆಕ್ಟೀವ್ ಕೌನ್ಸೆಲಿಂಗ್ ಕೇಂದ್ರಗಳ ಮೂಲಕ ವಿವಿಧ ಎಂಜಿನಿಯರಿಂಗ್ ಮತ್ತು ನಾನ್ ಎಂಜಿನಿಯರಿಂಗ್ ಕೋರ್ಸುಗಳ ಪ್ರಥಮ ಡಿಪ್ಲೋಮಾದಲ್ಲಿ ವ್ಯಾಸಂಗ ಮಾಡಲು ಇಚ್ಚಿಸುವ ಎಸ್ಎಸ್ಎಲ್ಸಿ ಉತ್ತೀರ್ಣರಾಗಿ ಒಟ್ಟಾರೆ ಶೇ.35 ಅಂಕಗಳನ್ನು ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಜೂನ್ 1ರವರೆಗೆ ವಿಸ್ತರಿಸಲಾಗಿದೆ.
ಜನಸ್ಪಂದನ ಸಭೆ
ಗುಲ್ಬರ್ಗ: ತಾಲೂಕಿನ ಜೀವಣಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಜೂನ್ 1ರಂದು ಬೆಳಗ್ಗೆ 11 ಗಂಟೆಗೆ ಜನಸ್ಪಂದನ ಕಾರ್ಯಕ್ರಮ ಜರುಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

