ಗುಲ್ಬರ್ಗಾ

ಗುಲ್ಬರ್ಗ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಇಸ್ಲಾಂ

Published On :

ಗುಲ್ಬರ್ಗ:  ವಿಭಾಗೀಯ ಕೇಂದ್ರವಾಗಿರುವ ಗುಲ್ಬರ್ಗ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು 200 ಕೋಟಿ ಅಗತ್ಯವಿದ್ದು, ಈ ಕುರಿತು ಪ್ರಸ್ತಾವನೆಯೊಂದನ್ನು ಸಿದ್ಧಪಡಿಸುವಂತೆ ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ತಿಳಿಸಿದರು.
ಕುಡಿಯವ ನೀರಿನ ಸಮಸ್ಯೆ ಕುರಿತು ಜಲ ಮಂಡಳಿಯ ಅಧಿಕಾರಗಳೊಂದಿಗೆ ಸಭೆ ನಡೆಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಂಟು ದಿನಗಳಲ್ಲಿಯೇ ಪ್ರಸ್ತಾವನೆ ಸಿದ್ಧಪಡಿಸುವಂತೆ ತಿಳಿಸಲಾಗಿದೆ ಎಂದರು.
ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ನೀರು ವಿತರಣಾ ಜಾಲ ಸುಧಾರಿಸಬೇಕಾಗಿದೆ. ಅದಕ್ಕಾಗಿ ಪೈಪ್‌ಲೈನ್ ದುರಸ್ತಿ ಮಾಡಬೇಕು. ಹೊಸ ಓವರ್ ಹೆಡ್ ಟ್ಯಾಂಕ್‌ಗಳನ್ನು ನಿರ್ಮಿಸಬೇಕು. ಅದಕ್ಕಾಗಿ 200 ಕೋಟಿ ಬೇಕಾಗಬಹುದುದೆಂದು ಅಂದಾಜಿಸಲಾಗಿದೆ ಎಂದರು.
ಭೀಮಾ ಹಾಗೂ ಬೆಣ್ನೆತೊರೆಯಿಂದ ಹೆಚ್ಚಿನ ನೀರು ಪಡೆಯಲು ಅವಕಾಶವಿದೆ. ಸದ್ಯ ಭೀಮಾದಿಂದ 10 ಎಂಜಿಡಿ ಹಾಗೂ ಬೆಣ್ಣೆತೊರೆಯಿಂದ ಕೇವಲ 2 ಎಂಜಿಡಿ ನೀರು ಪಡೆಯಲಾಗುತ್ತಿದೆ. ಹೀಗಾಗಿ 6 ಎಂಜಿಡಿ ನೀರಿನ ಕೊರತೆ ಎದುರಿಸುವಂತಾಗಿದೆ ಎಂದರು.
200 ಕೋಟಿ ಪ್ರಸ್ತವಾನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ನೆರವು ಪಡೆಯಲು ಅವಕಾಶವಿದೆ. ಸ್ಥಳೀಯ ಸಂಸ್ಥೆ ಹಾಗೂ ರಾಜ್ಯ ಸರ್ಕಾರ ತಲಾ ಶೇ.10ರಷ್ಟು ಭರಿಸಲಿದೆ. ಇನ್ನುಳಿದ ಶೇ.80 ರಷ್ಟು ನೆರವು ಇಲ್ಲದೆ ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯಲು ಅವಕಾಶವಿದೆ ಎಂದು ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.