ಮರಾಠಿಯಲ್ಲಿ ಪ್ರಮಾಣ ವಚನ, ಕರವೇ ಆಕ್ರೋಶ
ಯಾದಗಿರಿ: ಶಾಸಕರಾದ ಸಂಭಾಜಿ ಪಾಟೀಲ್ ಮತ್ತು ಅರವಿಂದ್ ಪಾಟೀಲರು ಮರಾಠಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದನ್ನು ಖಂಡಿಸಿ ಕರವೇ ಕಾರ್ಯಕರ್ತರು ನಗರದ ಕೇಂದ್ರ ಬಸ್ ನಿಲ್ದಾಣದೆದುರು ಬುಧವಾರ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿ ದಹಿಸಿದರು. ಈ ವೇಳೆ ಮಾತನಾಡಿದ ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ, ಶಾಸಕರು ಕನ್ನಡ ಭಾಷೆಯಲ್ಲಿ ಮಾತನಾಡದೇ ಮರಾಠಿ ಭಾಷೆಯಲ್ಲಿ ಮಾತನಾಡಿ ಕನ್ನಡಕ್ಕೆ ಅವಮಾನ ಮಾಡಿದ್ದಾರೆ. ಕರ್ನಾಟಕದ ವಿಧಾನಸಭೆಗೆ ಆಯ್ಕೆಯಾಗಿ ಮರಾಠಿಯಲ್ಲಿ ಪ್ರಮಾಣ ಸ್ವೀಕರಿಸಿರುವುದು ಖಂಡನೀಯ. ಕೂಡಲೇ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದೊಡ್ಡಬಳ್ಳಾಪುರದ ರೆಸಾರ್ಟ್ನಲ್ಲಿ ನಂಗನಾಚ್ ನೃತ್ಯ ಖಂಡನೀಯವಾಗಿದೆ. ಈ ಕೂಡಲೇ ತಪ್ಪಿತಸ್ಥರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ದೇವು ಪಾಟೀಲ್, ಸಿದ್ದುರಡ್ಡಿ, ರವಿ ತಡಿಬಿಡಿ, ಗುರುರಾಜ ಹಳಿಸಗರ, ನಿಂಗು ಗಂಗಾನಗರ, ಮರಿಲಿಂಗ, ಸುಪ್ರೀತ್, ಬಸವರಾಜ, ವೆಂಕಟೇಶ, ಫಕೀರ ಅಹ್ಮದ್ ವಡಗೇರಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

