ಗುಲ್ಬರ್ಗಾ

ಬಿಆರ್ಜಿಎಫ್ ಕಾರ್ಯಾಗಾರ ಇಂದು

Published On :

ಯಾದಗಿರಿ: ಬಿಆರ್ಜಿಎಫ್ ಯೋಜನೆಯಡಿ 2013-14ನೇ ಸಾಲಿನ ವಾರ್ಷಿಕ ಕ್ರಿಯಾಯೋಜನೆ ರೂಪಿಸುವ ಕುರಿತು ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಕಾರ್ಯಾಗಾರವನ್ನು ಮೇ 31ರಂದು ಏರ್ಪಡಿಸಲಾಗಿದೆ. ಶುಕ್ರವಾರ ಬೆಳಗ್ಗೆ 9-30 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷೆ ಮರೆಮ್ಮ ಶ್ಯಾಣೆನೂರ ಅವರ ಅಧ್ಯಕ್ಷತೆಯಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ. ಜಿಲಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು  ನಾಮಫಲಕ ಅನಾವರಣ
ಸುರಪುರ: ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ 10-30 ಗಂಟೆಗೆ ಬಸವೇಶ್ವರ ನಾಮಫಲಕ ಅನಾವರಣ, ಯುವಕ ಸಂಘ ಉದ್ಘಾಟನೆ ಮತ್ತು ಬಸವ ದಳದ 8ನೇ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ವೀರಶೈವ ಯುವ ವೇದಿಕೆ ತಿಳಿಸಿದೆ.ಬಸವ ಜಯಂತಿ ಶತಮಾನೋತ್ಸವದ ಅಂಗವಾಗಿ ಬಸವೇಶ್ವರ ಭಾವಚಿತ್ರ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ದೇವಪುರ ಜಡಿಶಾಂತಲಿಂಗೇಶ್ವರ ಸಂಸ್ಥಾನ ಮಠದ ಶಿವಮೂರ್ತಿ ಶಿವಾಚಾರ್ಯ, ಚಿಗರಳ್ಳಿ ಮರಳು ಶಂಕರ ದೇವರ ಮಠದ ಸಿದ್ದಬಸವ ಕಬೀರಾನಂದ ಸ್ವಾಮಿ ಮತ್ತು ಕರಡಕಲ್ ಶಾಂತರುದ್ರಮನ ಸ್ವಾಮಿ ಸಾನ್ನಿಧ್ಯ ವಹಿಸುವರು. ಸಮಾಜದ ಅಧ್ಯಕ್ಷ ಸುರೇಶ ಸಜ್ಜನ ಕಾರ್ಯಕ್ರಮ ಉದ್ಘಾಟಿಸುವರು. ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ರಾಜಶೇಖರಗೌಡ ವಜ್ಜಲ್ ಅಧ್ಯಕ್ಷತೆ ವಹಿಸುವರು. ಶಿವಾನಂದ ಮಾನಕರು, ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಪ್ರಮುಖರಾದ ಬಸವರಾಜ ದೇಶಮುಖ, ಕರವೇ ಉತ್ತರ ಕರ್ನಾಟಕದ ಅಧ್ಯಕ್ಷ ಶರಣು ಗದ್ದುಗೆ, ಚಂದ್ರಶೇಖರಗೌಡ ಮಾಗನೂರು, ಎಚ್.ಸಿ.ಪಾಟೀಲ್, ಸಂಗನಗೌಡ ವಜ್ಜಲ್, ಬಸಣ್ಣ ನಗನೂರು, ಸುರೇಶ ತಂಬಾಕೆ ಭಾಗವಹಿಸಲಿದ್ದಾರೆ ಎಂದು ವೇದಿಕೆ ತಿಳಿಸಿದೆ.
ಗರುಡಾದ್ರಿ ಚಿತ್ರಕಲೆ ಅವಲೋಕನ ಇಂದು
ಸುರಪುರ: ಸಮೀಪದ ರಂಗಂಪೇಟೆ ಕರ್ನಾಟಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಬೆಳಗ್ಗೆ 10.30 ಗಂಟೆಗೆ ನೃಪತುಂಗ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಮತ್ತು ಕನ್ನಡ ಸಾಂಸ್ಕೃತಿಕ ಶಕ್ತಿ ಕೇಂದ್ರ ತಾಲೂಕು ಘಟಕದ ಸಂಯುಕ್ತಾಶ್ರಯದಲ್ಲಿ ಗರುಡಾದ್ರಿ ಚಿತ್ರಕಲೆ  ಅವಲೋಕ ಎಂಬ ಉಪನ್ಯಾಸ  ಆಯೋಜಿಸಲಾಗಿದೆ. ಡಾ.ವಿಜಯ ಹಾಗರಗುಂಡಗಿ ಉಪನ್ಯಾಸ ನೀಡುವರು.   ರಾಜಗೋಪಾಲ ವಿಭೂತಿ, ಬಸವರಾಜ ಕಲೆಗಾರ, ಎ.ಕೃಷ್ಣ ಸುರಪುರ, ನಾಗಣ್ಣ ಪೂಜಾರಿ  ಪಾಲ್ಗೊಳ್ಳಲಿದ್ದಾರೆ ಎಂದು  ಸಂಸ್ಥೆ ಕಾರ್ಯದರ್ಶಿ ದೇವು ಹೆಬ್ಬಾಳ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.