ಬಸವಜ್ಯೋತಿ-ಬಸವರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಮೇ 30
ಬಿಜಾಪುರ ತಾಲೂಕಿನ ಆಹೇರಿ ಗ್ರಾಮದ ಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ ಸಂಸ್ಕೃತಿ ವೇದಿಕೆಯಿಂದ ಬಸವ ಜಯಂತಿ ಹಾಗೂ ರಾಜ್ಯ ಮಟ್ಟದ ವಚನೋತ್ಸವ ಕಾರ್ಯಕ್ರಮದ ಅಂಗವಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ 2013-14ನೇ ಸಾಲಿನ ಬಸವಜ್ಯೋತಿ ರಾಜ್ಯ ಪ್ರಶಸ್ತಿ ಹಾಗೂ ಬಸವರತ್ನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದೆ.
ನಾಡಿನ ಸಮಾಜದ ಪ್ರಗತಿಪರ ಅಭಿವೃದ್ಧಿಗಾಗಿ ಕನ್ನಡ ರಕ್ಷಣೆ, ಸಂಸ್ಕೃತಿ, ನಾಟಕ, ರಂಗಭೂಮಿ, ಸಂಗೀತ, ನೃತ್ಯ, ಪತ್ರಿಕೋದ್ಯಮ, ಚಿತ್ರಕಲೆ, ಶಿಕ್ಷಣ, ಛಾಯಾಚಿತ್ರ, ಚಲನಚಿತ್ರ, ಸಮಾಜ ಸೇವೆ, ಶಿಲ್ಪಕಲೆ, ಕ್ರೀಡೆ, ವೈದ್ಯಕೀಯ, ಪಶುವೈದ್ಯಕೀಯ, ವಿಜ್ಞಾನ, ತಂತ್ರಜ್ಞಾನ, ತಾಂತ್ರಿಕ, ಕೃಷಿ, ಜನಪದ ಯಕ್ಷಗಾನ, ಆಡಳಿತ, ಭರತನಾಟ್ಯ ಹಾಗೂ ಸಂಘ ಸಂಸ್ಥೆ ಮತ್ತು ಸರ್ಕಾರದ ವಿವಿಧ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವವರು ತಮ್ಮ ಇತ್ತೀಚಿನ 3 ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ತಾವು ಸಾಧನೆಗೈದ ಸಂಪೂರ್ಣ ವಿವರಗಳನ್ನೊಳಗೊಂಡ ಮಾಹಿತಿಯನ್ನು ಬಂಡೆಪ್ಪ ಜಿ. ತೇಲಿ ಅಧ್ಯಕ್ಷರು ಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ, ಸಂಸ್ಕೃತಿ ವೇದಿಕೆ, ಆಹೇರಿ- 586 112 ತಾ. ಬಿಜಾಪುರ ಇವರಿಗೆ ಅಂಚೆ ಚೀಟಿ ಲಗತ್ತಿಸಿದ ಲಕೋಟೆಯೊಂದಿಗೆ ಜೂನ್ 17 ರೊಳಗಾಗಿ ಅರ್ಜಿ ಸಲ್ಲಿಸಬೇಕು. ವಿವರಕ್ಕೆ ಮೊ. 90088 45750ಗೆ ಸಂಪರ್ಕಿಸಬಹುದು.
ಬಸವ ಮಾರ್ಗ ಪ್ರಶಸ್ತಿಗೆ ಕೃತಿಗಳ ಆಹ್ವಾನ
ಗುಲ್ಬರ್ಗ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಸವ ಮಾರ್ಗ ಪ್ರತಿಷ್ಠಾನವು ರಾಜ್ಯ ಮಟ್ಟದಲ್ಲಿ ನೀಡುವ ಬಸವ ಮಾರ್ಗ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿದೆ. ಜೂನ್ 18ರಂದು ಸುರಪುರ ತಾಲೂಕಿನ ಸತ್ಯಂಪೇಟೆಯಲ್ಲಿ ನಡೆಯಲಿರುವ ಲಿಂ. ಗುರಪ್ಪ ಯಜಮಾನರ 26ನೇ ಸ್ಮರಣೋತ್ಸವ ಹಾಗೂ ಬಸವತತ್ವ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕ ಸಂತೋಷ ಸತ್ಯಂಪೇಟೆ ತಿಳಿಸಿದ್ದಾರೆ. ಬಸವಮಾರ್ಗ ಪ್ರಶಸ್ತಿಯು 5 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. 2005ರಿಂದ ಇಲ್ಲಿಯವರೆಗೆ ಪ್ರಕಟವಾದ ಶರಣ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳ ಎರಡು ಪ್ರತಿಗಳನ್ನು ಜೂನ್ 10ರ ಒಳಗಾಗಿ ಸಂತೋಷ ಸತ್ಯಂಪೇಟೆ, ಬಸವ ಮಾರ್ಗ, ಚರಬಸವೇಶ್ವರ ಕಾಲೋನಿ, ಶಹಾಪುರ- 585 223ಗೆ ಕಳುಹಿಸಲು ಕೋರಲಾಗಿದೆ. ವಿವರಕ್ಕೆ 94484 11672ಗೆ ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

