ಗುಲ್ಬರ್ಗಾ

'ತಂಬಾಕಿನ ಹಿಡಿತದಲ್ಲಿ ಯುವ ಬದುಕು ಅಂತ್ಯ'

Published On :

ಕ.ಪ್ರ. ವಾರ್ತೆ, ಯಾದಗಿರಿ, ಮೇ 31
ಇಂದಿನ ಯುವ ಪೀಳಿಗೆ ತಂಬಾಕಿನ ಹಿಡಿತದಲ್ಲಿ ಬೆಂದು ತಮ್ಮ ಬದಕನ್ನು ಅಂತ್ಯಗೊಳಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ವಿದ್ಯಾವತಿ ಎಸ್. ಅಕ್ಕಿ ಕಳವಳ ವ್ಯಕ್ತಪಡಿಸಿದರು.
  ಇಲ್ಲಿನ ನಗರಸಭೆ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ನಗರಸಭೆ ಕಾರ್ಯಾಲಯ ಇವುಗಳ ಆಶ್ರಯದಲ್ಲಿ ಶುಕ್ರವಾರ ತಂಬಾಕು ಮುಕ್ತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಂಬಾಕು ಯುವ ತಲೆಮಾರಿನ ನಡುವೆ ಒಂದು ಚಟವಾಗಿ ಮಾತ್ರವಲ್ಲ, ಒಂದು ಫ್ಯಾಷನ್ ಆಗಿ ಮಾರ್ಪಟ್ಟಿರುವುದು ನಿಜಕ್ಕೂ ಆತಂಕಕಾರಿ. ತಂಬಾಕು ಸೇವನೆ ಕೆಲಕ್ಷಣದ ಸಮಾಧಾನ ನೀಡಬಹುದುದಾದರೂ ಅದು ಹೆಚ್ಚು ಕಾಲ ಉಳಿಯುವುದಿಲ್ಲ. ಈ ಸತ್ಯದ ಅರಿವಿದ್ದರೂ ಜನ ಜಾಗೃತರಾಗದಿರುವುದು ವಿಪರ್ಯಾಸ. ತಂಬಾಕಿನಿಂದ ಬರುವ ಅನಾರೋಗ್ಯವನ್ನು ತಪ್ಪಿಸಲು, ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತಿದೆ. ಯುವ ಜನತೆಯೇ ಹೆಚ್ಚು ತಂಬಾಕು ಸೇವನೆಗೆ ಬಲಿಯಾಗುತ್ತಿದ್ದು, ಇದನ್ನು ತಡೆಗಟ್ಟಲು ಮಹಿಳೆಯರು ಮುಂದಾಗಬೇಕು ಎಂದರು.
  ಸರ್ಕಾರಿ ಆಸ್ಪತ್ರೆ ಹಿರಿಯ ತಜ್ಞ ಡಾ. ಭಗವಂತ ಅನ್ವರ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಂತೋಷಕುಮಾರ ಮಹೇಂದ್ರಕರ್, ಪ್ರಥಮ ದರ್ಜೆ ಸಿವಿಲ್ ನ್ಯಾಯಧೀಶ ಟಿ.ಶ್ರೀನಿವಾಸ, ನಗರಸಭೆ ಆಯುಕ್ತ ಮಹಮ್ಮದ ಮುನೀರ್, ಪುಷ್ಟಲತಾ ಪಾಟೀಲ್ ಇದ್ದರು. ರವಿಂದ್ರ ಕಾರಬಾರಿ ಸ್ವಾಗತಿಸಿದರು. ದೇವಿಂದ್ರಪ್ಪ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.