ಗುಲ್ಬರ್ಗಾ

ಮೊಬೈಲ್ ಟವರ್ ಬ್ಯಾಟರಿ ಕಳವು

Published On :

ಗುಲ್ಬರ್ಗ:   ಸುಮಾರು 54000 ಮೌಲ್ಯದ ಮೊಬೈಲ್ ಟವರ್ ಬ್ಯಾಟರಿ ಕಳವು ಮಾಡಿಕೊಂಡ ಹೋದ ಘಟನೆ ಮರಗುತ್ತಿ ಕ್ರಾಸ್ನಲ್ಲಿ ನಡೆದಿದೆ.
  2,449 ಬ್ಯಾಟರಿಗಳನ್ನು ಜಾರ್ಜ್ ಮಾಡಲೆಂದು ವ್ಯವಸ್ಥೆ ಮಾಡಲಾಗಿತ್ತು. ಇದರಲ್ಲಿ 54 ಬ್ಯಾಟರಿ ಕಳ್ಳತನವಾಗಿದೆ ಎಂದು ಕಾವೇರಿ ನಗರದ ನಿವಾಸಿ ಮಲ್ಲಿಕಾರ್ಜುನ ತಂದೆ ಶಿವಶರಣಪ್ಪ ಕಲಬುರ್ಗಿ ಕಮಲಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಇಂದು ನುಡಿಹಬ್ಬ: ಉಪನ್ಯಾಸ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ವಲಯ ಕನ್ನಡ ಸಾಹಿತ್ಯ ಪರಿಷತ್ತುಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ನಿಮಿತ್ತ ನ.6ರಂದು ಬೆಳಗ್ಗೆ 11 ಗಂಟೆಗೆ ಚಿತ್ತಾಪುರ ತಾಲೂಕಿನ ಅವರಾದ “¸’ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ- ಕನ್ನಡಿಗ- ಕರ್ನಾಟಕ ಇಡೀ ತಿಂಗಳ ನುಡಿಹಬ್ಬ ಆಡಳಿತದಲ್ಲಿ ಕನ್ನಡ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
  ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುರೇಶ ಬಡಿಗೇರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಾಚಾರ್ಯರಾದ ನೈಮುನ್ನಿಸಾ ಬೇಗಂ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಕನ್ನಡ ಉಪನ್ಯಾಸಕ ಶರೀಫ್ ಉಪನ್ಯಾಸ ನೀಡಲಿದ್ದಾರೆ. ಪರಿಷತ್ತಿನ ವಲಯ ಅಧ್ಯಕ್ಷ ನಾಮದೇವ ಕಡಕೋಳ ಅಧ್ಯಕ್ಷತೆ ವಹಿಸಲಿದ್ದಾರೆಂದು ರಾಜಶೇಖರ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.