25ರಂದು 'ನುಡಿಸಿರಿ' ಕಾರ್ಯಕ್ರಮ
ಯಾದಗಿರಿ: ಕನ್ನಡ ನಾಡು ನುಡಿಗಾಗಿ ಶ್ರಮಿಸುತ್ತಿರುವ ದಕ್ಷಣ ಕನ್ನಡ ಜಿಲ್ಲೆ ಮೂಡುಬಿದಿರೆ ಆಳ್ವಾಸ್ ನುಡಿಸಿರಿ ಕಲಾತಂಡದಿಂದ ನ. 25ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನುಡಿಸಿರಿ ಬಳಗದ ಜಿಲ್ಲಾಧ್ಯಕ್ಷ ಸುರೇಶ ಸಜ್ಜನ್ ಹೇಳಿದರು.
ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರಕ್ಕೆ ನ. 24ರಂದು ನುಡಿಸಿರಿ ಬಳಗದ 300ಕ್ಕೂ ಹೆಚ್ಚು ಕಲಾವಿದರೂ ಆಗಮಿಸಲಿದ್ದಾರೆ. ನ. 25 ಸೋಮವಾರ ಸಂಜೆ ಮೈದಾನದಲ್ಲಿ ಬೃಹತ್ ವೇದಿಕೆ ಅಡಿ ಕಲಾವಿದರ ತಂಡ ನಾಡಿನ ಕಲೆ, ಸಾಹಿತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಪರಿಚಯಿಸುವ ಕಾರ್ಯಕ್ರಮ ನಡೆಯಲಿದೆ. ಈ ಭಾಗದ ಕಲಾವಿದರು, ಸಾಹಿತಿಗಳು, ಸಂಗೀತಗಾರರು ಹಾಗೂ ಜಿಲ್ಲೆಯ ಹೆಚ್ಚಿನ ಜನತೆ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ನುಡಿಸಿರಿ ಘಟಕ ಈಗಾಗಲೇ ಅಸ್ತಿತ್ವಕ್ಕೆ ಬಂದಿದೆ. ಮುಂಬರುವ ದಿನಗಳಲ್ಲಿ ಎಲ್ಲಾ ರಂಗಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವರನ್ನು ಘಟಕಕ್ಕೆ ಸೇರ್ಪಡೆ ಮಾಡಿಕೊಂಡು ಜಿಲ್ಲೆಯ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಪ್ರಗತಿಗೆ ಎಲ್ಲರೊಂದಿಗೆ ಶ್ರಮಿಸಲಾಗುವುದು ಎಂದರು.
ಬರುವ ಡಿ. 19ರಿಂದ 22ರವರೆಗೆ ಮೂಡುಬಿದಿರೆಯಲ್ಲಿ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ಕಾರ್ಯಕ್ರಮಕ್ಕೆ ದೇಶದ ಎಲ್ಲಾ ಭಾಗಗಳಿಂದ ಸುಮಾರು 19 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದೆ. ಜಿಲ್ಲೆಯ ಸಾಹಿತ್ಯ, ಕಲೆ, ಸಾಂಸ್ಕೃತಿಕ ಅಭಿಮಾನಿಗಳು ಮೊದಲು ತಲಾ ರು. 100 ಟಿಕೆಟ್ ಅನ್ನು ಜಿಲ್ಲಾ ನುಡಿಸಿರಿ ಬಳಗದ ಪ್ರಧಾನ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿ ಹೆಸರು ನೊಂದಾಯಿಸಿ ಪಡೆದಲ್ಲಿ ಮಾತ್ರ ಅವರಿಗಾಗಿ ಅಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆ ಸಂಘಟಿಕರಿಂದ ಮಾಡಲಾಗುತ್ತದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರೆಡ್ಡಿ ಪಾಟೀಲ್ ತುನ್ನೂರ್, ಜಿಪಂ ಮಾಜಿ ಸದಸ್ಯ ಶ್ರೀನಿವಾಸರೆಡ್ಡಿ ಪಾಟೀಲ್ ಚನ್ನೂರ್, ಬಳಗದ ಗೌರವಾಧ್ಯಕ್ಷ ಬಸವರಾಜ ಶಾಸ್ತ್ರೀಗಳು, ಉಪಾಧ್ಯಕ್ಷ ಸಂಜೀವರಾವ ಕುಲಕರ್ಣಿ, ಎಂ.ಕೆ. ಬೀರನೂರ, ಪ್ರಧಾನ ಕಾರ್ಯದರ್ಶಿ ಅನೀಲ್ ದೇಶಪಾಂಡೆ, ಶಾಂತರೆಡ್ಡಿ ಚೌದ್ರಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

