ಗುಲ್ಬರ್ಗಾ

ಹೊಸ ಮರಳು ನೀತಿ ಜಾರಿಗೆ ಆಗ್ರಹ

Published On :

ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ನ.5
ಅಕ್ರಮ ಮರಳು ಸಾಗಣೆ ಸ್ಥಗಿತಗೊಂಡಿದ್ದು, ಗೃಹ ನಿರ್ಮಾಣದಲ್ಲಿ ನಿರತ ಕೂಲಿ ಕಾರ್ಮಿಕರ ಬದುಕು ಬೀದಿ ಪಾಲಾಗುತ್ತಿದೆ. ಕೂಡಲೇ ಹೊಸ ಮರಳು ನೀತಿ ಜಾರಿಗೆ ತರಬೇಕು. ಇಲ್ಲವೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಕಾರ್ಮಿಕರು ಮಂಗಳವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಜಿಲ್ಲಾ ಗೃಹ ನಿರ್ಮಾಣ ಕೂಲಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ನೂರಾರು ಕಾರ್ಮಿಕರು ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಅಕ್ರಮ ಮರಳು ಸಾಗಣೆ ಮಾಡುವುದನ್ನು ಅಧಿಕಾರಿಗಳು ತಡೆಯುತ್ತಿದ್ದಾರೆ. ಮನೆ ನಿರ್ಮಾಣದ ಕೆಲಸವನ್ನು ಮಾಲೀಕರು ಸ್ಥಗಿತಗೊಳಿಸುತ್ತಿದ್ದು, ಕಾರ್ಮಿಕರಲ್ಲಿ ಬಹುತೇಕ ಎಲ್ಲರೂ ಬಡವರಾಗಿದ್ದಾರೆ. ಕೂಲಿ ಕೆಲಸದಿಂದ ಬಂದ ಹಣದಿಂದ ಸಂಸಾರ ನಡೆಸುವಂತ ಕಾರ್ಮಿಕರು ಇಂದು ಬೀದಿ ಪಾಲಾಗುತ್ತಿದ್ದಾರೆ. ಕೂಡಲೇ ಹೊಸ ಮರಳು ನೀತಿ ನಿರ್ಮಿಸಿ ಬಡಕಾರ್ಮಿಕರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.
ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರದಲ್ಲಿ ಎಚ್ಚರಿಸಿದ್ದಾರೆ. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಶಾಮರಾವ್ ಎಚ್. ಬೆಳಗುಂಪಿ, ಪ್ರಧಾನ ಕಾರ್ಯದರ್ಶಿ ರಮೇಶ ಮಾವನೂರಕರ್, ಕಾರ್ಯದರ್ಶಿ ಹಣಮಂತ ಬಂಡೆ, ಕೋಶಾಧ್ಯಕ್ಷ ಶರಣಪ್ಪ ಬಳಚಿಕ್ರ ಸೇರಿದಂತೆ ನೂರಾರು ಕಾರ್ಮಿಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.