ಇಂದು ಕೊರವಂಜೇಶ್ವರಿ ದೇಗುಲ ಕಟ್ಟಡಕ್ಕೆ ಅಡಿಗಲ್ಲು
ಚಿಂಚೋಳಿ: ಚಿಂಚೋಳಿ ತಾಲೂಕಿನ ಕೊರವಿ ಗ್ರಾಮದಲ್ಲಿ ಕೊರವಂಜೇಶ್ವರಿ ಮಾತಾ ದೇವಾಲಯ ಕಟ್ಟಡದ ಅಡಿಗಲ್ಲು ಸಮಾರಂಭ ನ.7ರಂದು ಬೆಳಗ್ಗೆ 11.30 ಗಂಟೆಗೆ ನಡೆಯಲಿದೆ.
ಹಾರಕೂಡ ಪೀಠಾಧಿಪತಿ ಚೆನ್ನವೀರ ಶಿವಾಚಾರ್ಯರು ಕಾರ್ಯಕ್ರಮ ನೆರವೇರಿಸುವರು. ಬಬಲಾದನ ಗುರುಪಾದಲಿಂಗಶ್ರೀ ಸಾನ್ನಿಧ್ಯ ವಹಿಸುವರು. ಭರತನೂರಿನ ಚಿಕ್ಕಗುರುನಂಜೇಶ್ವರ ಮಹಾಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಬಸವಲಿಂಗ ಶಿವಾಚಾರ್ಯರು ಕೋಡ್ಲಿ, ಸಿದ್ದಲಿಂಗ ಶಿವಾಚಾರ್ಯರು ಹೊಸಳ್ಳಿ ಮಠ ಸಮ್ಮುಖದಲ್ಲಿ ನಡೆಯುವ ಅಡಿಗಲ್ಲು ಸಮಾರಂಭ ಕಾರ್ಯಕ್ರಮವನ್ನು ಬೀದರ ಸಂಸದ ಧರ್ಮಸಿಂಗ್ ಉದ್ಘಾಟಿಸಲಿದ್ದಾರೆ. ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಶಾಸಕ ಡಾ.ಉಮೇಶ ಜಾಧವ, ದತ್ರಾತ್ರೇಯ ಪಾಟೀಲ್ ರೇವುರ, ಡಾ.ಅಜಯಸಿಂಗ್, ಮಾಜಿ ಸಚಿವ ಸುನೀಲ್ ವಲ್ಯಾಪುರೆ, ವೈಜನಾಥ ಪಾಟೀಲ್ ಇತರರು ಭಾಗವಹಿಸಲಿದ್ದಾರೆ.
ಸಂಜೆ 5 ಗಂಟೆಗೆ ಜಾನಪದ ಸೊಗಡು ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್, ಶಿವಶರಣಪ್ಪ ಸಜ್ಜನ್, ಡಾ.ರಾಮಚಂದ್ರ ಗಣಾಪುರ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುಭಾಷ ಶೀಲವಂತ ಮುಂತಾದವರು ಆಗಮಿಸಲಿದ್ದಾರೆ ಎಂದು ದೇವೇಂದ್ರಪ್ಪ ಪಾಟೀಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

