ಗುಲ್ಬರ್ಗಾ

18 ತಿಂಗಳಲ್ಲಿ ಒಳಚರಂಡಿ ಕಾಮಗಾರಿ ಪೂರ್ಣ

Published On :

ಕ.ಪ್ರ.ವಾರ್ತೆ,  ಯಾದಗಿರಿ,  ನ.6
ಏಷಿಯನ್ ಡೆವಲೆಪ್‌ಮೆಂಟ್ ಬ್ಯಾಂಕ್ ನೆರವಿನಲ್ಲಿ 25.14 ಕೋಟಿ ವೆಚ್ಚದಲ್ಲಿ ನಗರದಲ್ಲಿ ಕೈಗೊಳ್ಳುವ ಒಳಚರಂಡಿ ಕಾಮಗಾರಿಗೆ ಶಾಸಕ ಡಾ. ಎ.ಬಿ.ಮಾಲಕರಡ್ಡಿ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ನಗರದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲು 1994ರಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸತತ ಪ್ರಯತ್ನದಿಂದ ಈ ಕಾಮಗಾರಿಗೆ ಇಂದು ಪ್ರತಿಫಲ ದೊರೆತು ಕಾಮಗಾರಿಗೆ ಚಾಲನೆ ದೊರತಿದೆ. 18 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಒಳಚರಂಡಿಯಿಂದ ಸಾಗುವ ತ್ಯಾಜ ಪರಿಷ್ಕರಿಸಲು ನಗರದ ಹೊರವಲಯದಲ್ಲಿ 22 ಎಕರೆ ಜಮೀನು ಖರೀದಿಸಿ ಸಂಸ್ಕರಣ ಘಟಕದ ಕಾಮಗಾರಿ ಪೂರ್ಣಗೊಂಡಿದೆ. ಸಂಸ್ಕರಣದಿಂದ ಉತ್ಪತ್ತಿಯಾದ ಗೊಬ್ಬರವನ್ನು ರೈತರು ಬಳಕೆ ಮಾಡಿಕೊಳ್ಳಲು ಅನಕೂಲವಾಗಲಿದೆ. ಅದಕ್ಕಾಗಿ ಒಳಚರಂಡಿ ಕಾಮಗಾರಿ ಸುಗಮವಾಗಿ ಸಾಗಲು ನಗರದ ಸಾರ್ವಜನಿಕರು ಸಹಾಕರ ನೀಡಬೇಕು ಎಂದು ಹೇಳಿದರು.
ಕಾಮಗಾರಿ ನಿರ್ವಹಣೆ ಹೊಣೆ ಹೊತ್ತವರು ಕಾಮಗಾರಿ ಗುಣಮಟ್ಟ ಕಾಪಾಡಿಕೊಂಡು ಹೋಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ನಗರಸಭೆ ಅಧ್ಯಕ್ಷ ಮೊಹಮ್ಮದ ಇಸಾಖ್, ಪೌರಾಯುಕ್ತ ಖಾಜಾ ಮೊಹಿನೋದ್ದಿನ್, ಮುಖಂಡರಾದ ಶ್ರೀನಿವಾಸರೆಡ್ಡಿ ಕಂದಕೂರ, ಸುರೇಶ ಜೈನ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಎಂ.ಆರ್.ನಾಗನಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.