'ಕ್ರೀಡೆಯಿಂದ ಉತ್ತಮ ಆರೋಗ್ಯ'
ಕ.ಪ್ರ.ವಾರ್ತೆ, ಸುರಪುರ, ನ.6
ದಿನನಿತ್ಯ ಆಟ ಆಡುವುದರಿಂದ ಉತ್ತಮ ಆರೋಗ್ಯ, ಚಿಂತನಾಶಕ್ತಿವೃದ್ಧಿಸಿ ಬೌದ್ಧಿಕ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಎಂದು ಕಾಂಗ್ರೆಸ್ ಯುವ ಮುಖಂಡ ರಾಜಾ ವಾಸುದೇವ ನಾಯಕ ಹೇಳಿದರು.
ಇಲ್ಲಿಗೆ ಸಮೀಪದ ಕುಂಬಾರಪೇಟೆಯಲ್ಲಿ ಏಕಲವ್ಯ ಕ್ರಿಕೆಟ್ ಕ್ಲಬ್ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.
ಇಂದು ಕ್ರಿಕೆಟ್ ಹೆಚ್ಚು ಜನಪ್ರಿಯ ಕ್ರೀಡೆಯಾಗಿದೆ. ಯುವಕರಲ್ಲಿ ಕ್ರೀಡಾಸ್ಫೂರ್ತಿ ಹೆಚ್ಚಿಸಲು ಮುಂಬರುವ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವುದಾಗಿ ಭರವಸೆ ನೀಡಿದರು.
ಪ್ರಥಮ ಬಹುಮಾನದ ಪ್ರಾಯೋಜಕರಾಗಿದ್ದ ಪುರಸಭೆ ಸದಸ್ಯ ಮಲ್ಲಣ್ಣ ಐಕೂರ ಮಾತನಾಡಿ, ಕ್ರಿಕೆಟ್ ಭರಾಟೆಯಲ್ಲಿ ಗ್ರಾಮೀಣ ಕ್ರೀಡೆಗಳಾದ ಕಬಡ್ಡಿ, ಕುಸ್ತಿ ಸೆರಿದಂತೆ ಇತರೆ ಕ್ರೀಡೆಗಳು ಮಾಯವಾಗುತ್ತಿವೆ. ನಮ್ಮ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಗ್ರಾಮೀಣ ಕ್ರೀಡೆಗಳತ್ತ ಯುವಕರು ಹೆಚ್ಚು ಗಮನೀಡಬೇಕು ಎಂದು ಕರೆ ನೀಡಿದರು.
ಗ್ರಾಮೀಣ ಭಾಗದಲ್ಲಿ ಸಾಕಷ್ಟು ಕ್ರಿಡಾಪಟುಗಳು ಇದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರು ಮೇಲೆ ಬರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಹಿರಿಯರು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ ಉತ್ತೇಜನ ನೀಡಬೇಕು ಎಂದರು.
ದ್ವಿತೀಯ ಬಹುಮಾನ ನೀಡಿದ ಜಗದೀಶ ವಾಲಿ, ದೈಹಿಕ ಶಿಕ್ಷಕ ಲಕ್ಷ್ಮಣ ಬಿರಾದಾರ ಮಾತನಾಡಿದರು. ಡಾ. ಹರ್ಷವರ್ಧನ ರಫೂಗಾರ, ಡಾ. ಇಮ್ತಿಯಾಜ್ ಹುಸೇನ್, ಮಾನಶಪ್ಪ ದೊರಿ, ಹಯ್ಯಾಳಪ್ಪ ಶಾಂತಪುರ ಇತರರಿದ್ದರು.
ಕಾರ್ಯಕ್ರಮದಲ್ಲಿ ಬಂದೇನವಾಜ ಸ್ವಾಗತಿಸಿದರು. ಸಂದೀಪ ನಾಯಕ ನಿರೂಪಿಸಿ, ಶರಣು ನಾಯಕ ವಂದಿಸಿದರು. ಸತ್ಯಂಪೇಟೆಯ ಮಹರ್ಷಿ ವಾಲ್ಮೀಕಿ ಕ್ರಿಕೆಟ್ ಕ್ಲಬ್ ಪ್ರಥಮ, ಕುಂಬಾರಪೇಟೆಯ ಏಕಲವ್ಯ ಕ್ರಿಕೆಟ್ ಕ್ಲಬ್ ದ್ವಿತೀಯ ಬಹುಮಾನಕ್ಕೆ ಪಾತ್ರವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

