ಜೇವರ್ಗಿ ಅಭಿವೃದ್ಧಿಗೆ 40 ಕೋಟಿ ಪ್ರಸ್ತಾವನೆ: ಶಾಸಕ ಅಜಯ್ಸಿಂಗ್
ಕನ್ನಡಪ್ರಭ ವಾರ್ತೆ, ಜೇವರ್ಗಿ, ನ.7
ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರಕ್ಕೆ 40 ಕೋಟಿ ಪ್ರಸ್ತಾವನೆ ಕಳುಹಿಸಿರುವುದಾಗಿ ಶಾಸಕ ಡಾ. ಅಜಯಸಿಂಗ್ ತಿಳಿಸಿದ್ದಾರೆ.
“OÚ«ÚsÚ®Úúڒ¥æàM¦Væ ಮಾತನಾಡಿದ ಅವರು, ತಾವು ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನತೆಗೆ ನೀಡಿರುವ ಭರವಸೆಯಂತೆ ನಡೆದು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ನನ್ನದಾಗಿದೆ. ಆ ನಿಟ್ಟಿನಲ್ಲಿ ಯಾವುದೇ ಹಂತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನಗಳನ್ನು ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಈಗಾಗಲೇ ಕೇಂದ್ರ ಸರ್ಕಾರದಿಂದ ಅಲ್ಪಸಂಖ್ಯಾತರಿಗಾಗಿ ಇರುವ ಎಂಎಸ್ಡಿಬಿ ಯೋಜನೆಯಡಿ 10 ಕೋಟಿ ಪ್ರಸ್ತಾವನೆ ಸಲ್ಲಿಸಿದ್ದು, ಅಲ್ಪಸಂಖ್ಯಾತರು ಆರ್ಥಿಕವಾಗಿ ಸದೃಢವಾಗುವ ನಿಟ್ಟಿನಲ್ಲಿ ವಿವಿಧ ಹಂತದಲ್ಲಿ ತರಬೇತಿ ಹಾಗೂ ಅಲ್ಪಸಂಖ್ಯಾತರ ಬಡಾವಣೆಗಳ ಮೂಲಭೂತ ಸೌಲಭ್ಯ ಕಲ್ಪಿಸುವ ಮಹತ್ತರವಾದ ಯೋಜನೆ ಇದಾಗಿದೆ ಎಂದರು.
30 ಕೋಟಿ ಪ್ರಸ್ತಾವನೆ: ರಾಜ್ಯ ಸರ್ಕಾರದ ಯೋಜನೆಗಳ ಜೊತೆಗೆ ಪಟ್ಟಣದ ಹೆಚ್ಚಿನ ಅಭಿವೃದ್ಧಿಗೆ ತಾವು ಕೇಂದ್ರ ಸರ್ಕಾರಕ್ಕೂ ಮೊರೆ ಹೋಗಿದ್ದು, ಯುಐಡಿಎಸ್ಎಸ್ಎಂಡಿ ಯೋಜನೆಯಡಿ 30 ಕೋಟಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.
ಈ ಯೋಜನೆಯಡಿ ಪಟ್ಟಣದ ಷಣ್ಮುಖ ಶಿವಯೋಗಿಗಳ ಮಠದ ಬಳಿ ಇರುವ ಹಳ್ಳಕ್ಕೆ ಸೇತುವೆ ನಿರ್ಮಿಸಿ ಮುಂದೆ ರಸ್ತೆ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ. ಪಟ್ಟಣದಲ್ಲಿರುವ ಪ್ರಮುಖ ರಸ್ತೆಗಳು, ಸೇತುವೆಗಳು ನಿರ್ಮಿಸಿ ಎಲ್ಲ ಹಂತದ ನಾಗರಿಕ ಸೌಲಭ್ಯ ಕಲ್ಪಿಸುವುದಾಗಿ ಡಾ.ಅಜಯಸಿಂಗ್ ಹೇಳಿದರು.
'ವೈಜ್ಞಾನಿಕ ಪುಸ್ತಕಗಳು ಹೆಚ್ಚು ಹೊರಬರಲಿ'
ಗುಲ್ಬರ್ಗ: ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ವೈಜ್ಞಾನಿಕ ಕ್ಷೇತ್ರಕ್ಕೆ ಸಂಬಂಧಿಸಿದ ಗ್ರಂಥಗಳು ಹೆಚ್ಚು ಹೊರಬರಬೇಕು ಎಂದು ಹಿರಿಯ ವೈದ್ಯ ಸಾಹಿತಿ ಡಾ. ಪಿ. ಎಸ್. ಶಂಕರ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದಲ್ಲಿ ಆಯೋಜಿಸಿದ್ದ ಕನ್ನಡ- ಕನ್ನಡಿಗ- ಕರ್ನಾಟಕ ಇಡೀ ತಿಂಗಳ ನುಡಿಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಹಿತ್ಯ ಪ್ರಕಾಶನಕ್ಕಾಗಿ ಕೋಟ್ಯಂತರ ರು. ಖರ್ಚು ಮಾಡುವ ಸರ್ಕಾರ ಕನ್ನಡದ ಅಭಿವೃದ್ಧಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕನ್ನಡದ ಉಳಿವಿಗೆ ಕಾರಣವಾಗಬೇಕು ಎಂದು ಸಲಹೆ ನೀಡಿದರು.
ಗುಲ್ಬರ್ಗ ವಿವಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷೆ ಡಾ. ನಾಗಾಬಾಯಿ ಬುಳ್ಳಾ ಮಾತನಾಡಿದರು. ಜಿಲ್ಲಾ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೌರವ ಕಾರ್ಯದರ್ಶಿ ಬಿ.ಎಚ್. ನಿರಗುಡಿ ನಿರೂಪಿಸಿದರು. ರಾಜಶೇಖರ ಮಾಂಗ ಪ್ರಾರ್ಥನೆ ಗೀತೆ ಹಾಡಿದರು. ರಾಮಚಂದ್ರ ಹಡಪದ ಹಾಗೂ ಸಂಗಡಿಗರು ಕನ್ನಡ ಗೀತ ಗಾಯನ ಕಾರ್ಯಕ್ರಮ ಜರುಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

