ಗುಲ್ಬರ್ಗಾ

ಗೆಲವಿಗೆ ಶಕ್ತಿಮೀರಿ ಪ್ರಯತ್ನಿಸಿ: ಪಾಟೀಲ್

Published On :

ಕನ್ನಡಪ್ರಭ ವಾರ್ತೆ  ಚಿಂಚೋಳಿ  ನ.8
ಕಾಂಗ್ರೆಸ್ ಪಕ್ಷದ ಸಾಧನೆ, ಸರ್ಕಾರ ಹಮ್ಮಿಕೊಂಡಿರುವ ಜನಪರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಬೇಕಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೆಲವಿಗೆ ಶಕ್ತಿಮೀರಿ ಕಾರ್ಯಕರ್ತರು ಕೆಲಸ ಮಾಡಬೇಕಾಗಿದೆ ಎಂದು ಮಾಜಿ ಶಾಸಕರು, ಕೆಪಿಸಿಸಿ ಸದಸ್ಯ ಕೈಲಾಸ ಪಾಟೀಲ್ ಹೇಳಿದರು.
ಪಟ್ಟಣದ ಚಂದಾಪುರ ನಗರದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಜನರ ಆಸೆ ಆಕಾಂಕ್ಷೆ ಮತ್ತು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಕೇವಲ 4 ತಿಂಗಳು ಗತಿಸಿವೆ. ಇಲ್ಲಿನ ಶಾಸಕರ ವಿರುದ್ಧ ಅಪಸ್ವರ ಕೇಳಿ ಬರುತ್ತಿವೆ. ಶಾಸಕರಿಗೆ ಒಂದು ವರ್ಷ ಕಾಲಾವಕಾಶ ನೀಡಬೇಕಾಗಿದೆ. ಈಗಲೇ ಕಾರ್ಯಕರ್ತರಲ್ಲಿ ಅಸಮಾಧಾನ ವ್ಯಕ್ತಪಡಿಸುವುದು ಬೇಡ, ಪಕ್ಷದಲ್ಲಿ ಕಾರ್ಯಕರ್ತರನ್ನು ಭಾಗಿಯಾಗಲು ಅವಕಾಶ ನೀಡಲಾಗುತ್ತಿದೆ ಎಂದರು.
ಪಕ್ಷದ ಬಲವರ್ಧನೆಗೆ ಕಾರ್ಯಕರ್ತರು ಕೆಲಸ ಮಾಡಬೇಕಾಗಿದೆ. ಬಿಜೆಪಿ ಈಗಾಗಲೇ ಮೋದಿ ಅವರನ್ನು ಮುಂದಿಟ್ಟುಕೊಂಡು ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಬಿಜೆಪಿ ದೇಶ ವಿಭಜನೆ ಮಾಡಲು ಹೊರಟಿದೆ ಎಂದು ಟೀಕಿಸಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲವಿಗೆ ಶ್ರಮಿಸಬೇಕೆಂದು ಎಂದು ಕರೆ ನೀಡಿದರು.
ಸ್ಥಳೀಯ ಶಾಸಕ ಡಾ. ಉಮೇಶ ಜಾಧವ ಮಾತನಾಡಿ, ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಈಗಾಗಲೇ ಕೆಲವು ಮಂಜೂರಿಯಾಗಿವೆ ಮತ್ತು ಹಿಂದುಳಿದ ತಾಲೂಕಿಗೆ ಹೆಚ್ಚಿನ ಅನುದಾನ ನೀಡುವಂತೆ ಸಿಎಂಗೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.
ಕಾರ್ಯಕರ್ತರು ಕಾಂಗ್ರೆಸ್ ನಾಯಕರ ಬಗ್ಗೆ ಅಪಪ್ರಚಾರ ಮಾಡಬೇಡಿರಿ, ಕಾಂಗ್ರೆಸ್ ಪಕ್ಷ ರಾಜ್ಯದ ಅಭಿವೃದ್ಧಿಗೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದರು.
ಶಿವಕುಮಾರ್ ಕೊಳ್ಳೂರ್, ಕೆ.ಎಂ.ಬಾರಿ, ಜಿಪಂ ಸದಸ್ಯ ದೀಪಕನಾಗ ಪುಣ್ಯಶೆಟ್ಟಿ ಮುಂತಾದವರು ಮಾತನಾಡಿದರು.
ನರಸಮ್ಮ ಗಂಗನಪಳ್ಳಿ, ಮಾಜಿ ತಾಪಂ ಅಧ್ಯಕ್ಷ ಶಾಮರಾವ ರಾಠೋಡ, ಕೆ.ಎಂ. ಹಾಶ್ಮಿ, ಬಸವರಾಜ ಪಾಟೀಲ್ ಹದನೂರ, ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ಜಗದೀಶಸಿಂಗ್ ರಾಠೂರ್, ರಾಜೂ ನವಲೇ, ಉಮಾ ಪಾಟೀಲ್, ಬಸವರಾಜ ಮಲಿ, ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಅನೀಲಕುಮಾರ್ ಜಮಾದಾರ, ಲಕ್ಷ್ಮಣ ಅವಂಟಿ ಇತರರು ಉಪಸ್ಥಿತರಿದ್ದರು.
ಶ್ರೀನಿವಾಸ ಘಾಲಿ ಸ್ವಾಗತಿಸಿದರು. ಆರ್. ಗಣಪತರಾವ ನಿರೂಪಿಸಿದರು. ಡಾ. ತುಕಾರಾಮ ಪವಾರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.