ಸಾಮೂಹಿಕ ನಾಯಕತ್ವದಲ್ಲಿ ಎಸ್ಪಿ ಸಂಘಟನೆ
ಕನ್ನಡಪ್ರಭ ವಾರ್ತೆ ಟಿ ಗುಲ್ಬರ್ಗ ಟಿ ನ.8
ಸಮಾಜವಾದಿ ಜನತಾ ಪಕ್ಷ ರಾಜ್ಯದಲ್ಲಿ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಸಮುದಾಯಗಳ ಸಾಮೂಹಿಕ ನಾಯಕತ್ವದಲ್ಲಿ ಸಂಘಟನೆ ಮಾಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಜಿ.ಎಂ. ಗಾಡ್ಕರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುಡಿಯುವ ವರ್ಗಗಳಾದ ಅಸಂಘಟಿತ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಕಾರ್ಮಿಕರು, ರೈತರು, ಮಹಿಳೆಯರು ಹಾಗೂ ಇನ್ನಿತರ ಶ್ರಮಿಕ ವರ್ಗಗಳ ಸಮುದಾಯಗಳಿಗೆ ಸ್ವತಂತ್ರ, ಸ್ವಾಭಿಮಾನ ಹಾಗೂ ಸ್ವಾವಲಂಬನೆ ಬದುಕಿಗೆ ಹೆಚ್ಚು ಒತ್ತು ಕೊಡುವ ಮೂಲಕ ರಾಜ್ಯಾಧಿಕಾರದಲ್ಲಿ ಸಮಪಾಲು ಪಡೆದುಕೊಳ್ಳುವಂತೆ ಮಾಡಲು ಪಕ್ಷ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಚಳವಳಿಯನ್ನಾಗಿ ಸಂಘಟಿಸುತ್ತದೆ ಎಂದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 67 ವರ್ಷಗಳು ಕಳೆದಿದ್ದರೂ ಇಲ್ಲಿಯತನಕ ದೇಶವನ್ನಾಳಿದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಲ್ಪಸಂಖ್ಯಾತರ ಸಮುದಾಯಗಳನ್ನು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ನಿರಂತರವಾಗಿ ವಂಚನೆ ಮಾಡಿಕೊಂಡು ಬಂದಿವೆ ಎಂದು ಆರೋಪಿಸಿದರು.
28 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ: ಯಾವುದೇ ರಾಜಕೀಯ ಪಕ್ಷಗಳ ಜತೆ ಹೊಂದಾಣಿಕೆ ಮಾಡಿಕೊಳ್ಳದೆ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲೂ ಪಕ್ಷ ಚುನಾವಣೆ ಸ್ಪರ್ಧಿಸಲಿದೆ ಜಿ.ಎಂ. ಗಾಡ್ಕರ್ ಹೇಳಿದರು.
ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ 50 ಜನ ಕಾರ್ಯಕರ್ತರಿಗೆ ಸದಸ್ಯತ್ವ ನೀಡುವ ಮೂಲಕ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 10 ಸಾವಿರ ಜನ ಕಾರ್ಯಕರ್ತರ ಪಡೆಯನ್ನು ಹಾಗೂ ಪ್ರತಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 75- 80 ಸಾವಿರ ಕಾರ್ಯಕರ್ತರ ಪಡೆಯನ್ನು ಸಂಘಟಿಸಲಾಗುವುದು ಎಂದರು.
ಪ್ರತಿ ಲೋಕಸಭಾ ಕ್ಷೇತ್ರದಿಂದ ಒಬ್ಬ ಉತ್ತಮ, ಪ್ರಾಮಾಣಿಕ, ಕಳಂಕ ರಹಿತ, ಸಾಮಾಜಿಕ ಕಳಕಳಿಯುಳ್ಳ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತ ಸಮುದಾಯಗಳ ಪರ ಸಾಮೂಹಿಕ ನಾಯಕತ್ವದ ಗುಣಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕಿಳಿಸಲು ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುವುದು ಎಂದು ಹೇಳಿದರು.
ಮಾನೇಶ ಬಿಲ್ಲವ ಅವರನ್ನು ರಾಜ್ಯ ಕಾರ್ಯಾಧ್ಯಕ್ಷರಾಗಿ, ಶರಣಪ್ಪ ತೋರಣಕರ್, ಬಸವರಾಜ ಹಾಗರಗಿ, ಶರಣಪ್ಪ ಉದನೂರಕರ್ ಅವರನ್ನು ಜಿಲ್ಲಾ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷರು ಘೋಷಣೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

