ಗುಲ್ಬರ್ಗಾ

ಮೌಢ್ಯ ತಡೆ ಕಾಯ್ದೆ ಜಾರಿ ನಿರ್ಧಾರಕ್ಕೆ ಕರಾದಸಂಸ ಸ್ವಾಗತ

Published On :

ಸುರಪುರ: ರಾಜ್ಯದಲ್ಲಿ ಮೂಢನಂಬಿಕೆ ಮತ್ತು ಕಂದಾಚಾರಗಳನ್ನು ಹತ್ತಿಕ್ಕುವ ಉದ್ದೇಶದಿಂದ ಮೂಢನಂಬಿಕೆ ತಡೆ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಹಾಗೂ ಸಂಘಟನಾ ಸಂಚಾಲಕ ಶರಣಪ್ಪ ದಖನಿ ಮತ್ತು ತಾಲೂಕು ಘಟಕದ ಅಧ್ಯಕ್ಷ ಮಾನಪ್ಪ ಬಿಜಾಸ್ಪೂರ ಮಾತನಾಡಿ, ಸನಾತನ ಹಿಂದು ಧರ್ಮದ ಸಾಂಪ್ರದಾಯಿಕ ಮೂಢನಂಬಿಕೆ ಮತ್ತು ಕಂದಾಚಾರಗಳನ್ನು ವಿರೋಧಿಸಿ ನಮ್ಮ ಸಮಿತಿ ಹಲವಾರು ವರ್ಷಗಳಿಂದ ರಾಜ್ಯದಲ್ಲಿ ಸಾಕಷ್ಟು ಹೋರಾಟ ಮಾಡಿದೆ. ಮುಖ್ಯಮಂತ್ರಿ ಪ್ರಜ್ಞಾವಂತಿಕೆಯಿಂದ ತಡೆ ಕಾಯ್ದೆಯನ್ನು ಕಾನೂನಾತ್ಮಕವಾಗಿ ಜಾರಿಗೆ ತರಲು ನಿರ್ಧಾರಿಸಿರುವುದನ್ನು ಸಮಿತಿ ಸ್ವಾಗತಿಸುತ್ತದೆ. ಸಮಿತಿಯ ನಿರಂತರ ಹೋರಾಟಕ್ಕೆ ಸಂದ ಜಯ ಎಂದರು.
ಮೂಢನಂಬಿಕೆ ಮತ್ತು ಕಂದಾಚಾರಗಳ ಆಚರಣೆಯಿಂದ ಹಿಂದುಳಿದ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳನ್ನು ಶೋಷಣೆ ಮಾಡಲಾಗುತ್ತಿದೆ. ದೇವರು ಧರ್ಮದ ಹೆಸರಿನ ಮೇಲೆ ಬೆತ್ತಲು ಸೇವೆ, ಪ್ರಾಣಿ ಬಲಿ, ವಾಮಾಚಾರ ವ್ಯಾಪಕವಾಗಿ ನಡೆದಿದೆ.
ಕೆಲ ಮಠಾಧೀಶರು, ಜಾತಿ ಗುರುಗಳು ಕಂದಾಚಾರಗಳ ಮೂಲಕ ಶೋಷಿತ ವರ್ಗಗಳನ್ನು ಅಸ್ಪೃಶ್ಯತಾ ದೃಷ್ಟಿಯಿಂದ ಕಾಣುತ್ತಿದ್ದಾರೆ. ಈ ಎಲ್ಲಾ ಅನಿಷ್ಟಗಳಿಗೆ ಇತಿಶ್ರೀ ಹೇಳಲು ಬೆಳಗಾವಿ ಅಧಿವೇಶನದಲ್ಲಿ ವಿದೇಯಕ ಮಂಡನೆಯಾಗಿ ಕಾನೂನಾತ್ಮಕವಾಗಿ ಜಾರಿ ಮಾಡಬೇಕು. ಮೂಢನಂಬಿಕೆ ಮುಕ್ತ ರಾಜ್ಯ ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರ ಹೊಸ ಭಾಷೆ ಬರೆಯಬೇಕೆಂದು ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.