ಗುಲ್ಬರ್ಗಾ

ಕನ್ನಡ ಅನುಷ್ಠಾನ ಕಾರ್ಯ ವಿಧಾನಸೌಧದಿಂದ ಆಗಲಿ

Published On :

ಕನ್ನಡಪ್ರಭ ವಾರ್ತೆ  ಗುಲ್ಬರ್ಗ  ನ.9
ತಾಲೂಕು, ಜಿಲ್ಲಾ ಕೇಂದ್ರಗಳಿಗಿಂತ ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಿಂದ ಆಡಳಿತದಲ್ಲಿ ಕನ್ನಡ ಅನುಷ್ಠಾನಗೊಳ್ಳುವ ಕೆಲಸ ಆರಂಭವಾಗಬೇಕಾಗಿದೆ ಎಂದು ರೇವಗ್ಗಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಎಂ.ಎಫ್. ಶರೀಫ್ ಹೇಳಿದರು.
ತಾಲೂಕಿನ ಅವರಾದ (ಬಿ) ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಉತ್ತರ ವಲಯ ಕನ್ನಡ ಸಾಹಿತ್ಯ ಪರಿಷತ್ತು ಗುಲ್ಬರ್ಗ ಸಹಯೋಗದಲ್ಲಿ ನಡೆದ ರಾಜ್ಯೋತ್ಸವ ನಿಮಿತ್ತ ಕನ್ನಡ- ಕನ್ನಡಿಗ- ಕರ್ನಾಟಕ ಇಡೀ ತಿಂಗಳ ನುಡಿ ಹಬ್ಬ ಕಾರ್ಯಕ್ರಮದಲ್ಲಿ ಆಡಳಿತದಲ್ಲಿ ಕನ್ನಡ ಕುರಿತು ವಿಶೇಷ ಉಪನ್ಯಾಸ ನೀಡಿದರು.
ರಾಜ್ಯ ಸರ್ಕಾರ ಆಂಗ್ಲ ಭಾಷೆಯ ವ್ಯಾಮೋಹದಿಂದ ಸಮರ್ಪಕವಾಗಿ ಕನ್ನಡ ಆಡಳಿತ ಭಾಷೆ ಕಾರ್ಯಗತಗೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುರೇಶ ಬಡಿಗೇರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಕಥೆ, ಕವನ ಬರೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ನೈಮುನ್ನಿಸಾ ಬೇಗಂ, ಉತ್ತರ ವಲಯ ಕಸಾಪ ಅಧ್ಯಕ್ಷ ನಾಮದೇವ ಕಡಕೋಳ, ಗೌರವ ಕಾರ್ಯದರ್ಶಿ ರಾಜಶೇಖರ ಮಾಂಗ, ಅಶ್ವಿನಿ, ಸುಧಾ ಜಗನ್ನಾಥ, ಭಗವಂತರಾಯ ನೆಲ್ಲಗಿ, ಅನ್ನಪೂರ್ಣ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.