ಬಾಯ್ಲರ್ ಆಪರೇಷನ್ ಎಂಜಿನಿಯರ್ಸ್ ಪರೀಕ್ಷೆಗೆ ಅರ್ಜಿ
ಗುಲ್ಭರ್ಗ: ಬಾಯ್ಲರ್ ಆಪರೇಷನ್ ಎಂಜಿನಿಯರ್ಸ್ ಪರೀಕ್ಷಾ ಮಂಡಳಿಯು ಕರ್ನಾಟಕ ಬಾಯ್ಲರ್ ಆಪರೇಷನ್ ಎಂಜಿನಿಯರ್ಸ್ ಪರೀಕ್ಷೆ ನಡೆಸಲು ಉದ್ದೇಶಿಸಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ವಯೋವುತಿ 23ಕ್ಕಿಂತ ಕಡಿಮೆ ಇರದ ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕೆಮಿಕಲ್, ಪವರ್ ಪ್ಲಾಂಟ್, ಪ್ರೊಡಕ್ಷನ್, ಇನ್ಸ್ಟ್ರುಮೆಂಟೇಷನ್ ಮತ್ತು ಎಂಜಿನಿಯರಿಂಗ್ನಲ್ಲಿ ಪದವಿ ಅಥವಾ ಡಿಪ್ಲೊಮಾ ಉತೀರ್ಣರಾಗಿರಬೇಕು.
ಆಸಕ್ತ ಅರ್ಹ ಅಭ್ಯರ್ಥಿಗಳು ಪರೀಕ್ಷಾ ಅರ್ಜಿ ನಮೂನೆಗಾಗಿ ಮನವಿ ಪತ್ರವನ್ನು 10 ಅಂಚೆ ಚೀಟಿ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯೊಂದಿಗೆ ಕಾರ್ಯದರ್ಶಿ, ಬಾಯ್ಲರ್ ಆಪರೇಷನ್ ಎಂಜಿನಿಯರ್ಸ್ ಪರೀಕ್ಷಾ ಮಂಡಳಿ, ಕಾರ್ಮಿಕ ಭವನ, 2ನೇ ಮಹಡಿ, ಬೆಂಗಳೂರು ಡೈರಿ ಸರ್ಕಲ್ ಹತ್ತಿರ ಬನ್ನೇರುಘಟ್ಟ ರಸ್ತೆ, ಬೆಂಗಳೂರು 29 ಇವರಿಗೆ ಸಲ್ಲಿಸಿ ಪಡೆದುಕೊಳ್ಳಬಹುದಾಗಿದೆ. ಪರೀಕ್ಷೆಯ ಅರ್ಜಿ ನಮೂನೆಗಳನ್ನು ಜಾಲತಾಣ ಢಿಢಿಢಿ.್ಞಛ್ಠಟಿಛಡಿಛ್ಞಛ.್ಜ್ಟಢ.್ಝಟಿಅಡ್ಡ್ಠ್ಞಝಛಡಿಜ ಅಥವಾ ಢಿಢಿಢಿ.ಟಛಛ್ಟ್ಡ್ಠಿ.್ಞಛ್ಠ.ಟ್ಝ್ಛಿ.್ಝಟಿ ಗಳಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಇಲಾಖೆಯ ಗುಲ್ಬರ್ಗ, ಮೈಸೂರು, ಮಂಗಳೂರು, ದಾವಣಗೆರೆ, ಶಿವಮೊಗ್ಗ, ಹುಬ್ಬಳ್ಳಿ ಹಾಗೂ ಬೆಳಗಾವಿ ವಿಭಾಗೀಯ ಕಚೇರಿಗಳಿಂದಲೂ ಸಹ ಖುದ್ದಾಗಿ ಪಡೆದುಕೊಳ್ಳಬಹುದಾಗಿದೆ.
ಪರೀಕ್ಷೆಗೆ ಕುಳಿತುಕೊಳ್ಳುವ ಅಭ್ಯರ್ಥಿಗಳು 1500 ಪರೀಕ್ಷಾ ಶುಲ್ಕವನ್ನು ಕಾರ್ಖಾನೆಗಳ ಮತ್ತು ಬಾಯ್ಲರುಗಳ ನಿರ್ದೇಶಕರು, ಬೆಂಗಳೂರು ಇವರ ಹೆಸರಿನಲ್ಲಿ ರಾಷ್ಟ್ರೀಕೃತ ಶೆಡ್ಯೂಲ್ಡ್ ಬ್ಯಾಂಕ್ಗಳಲ್ಲಿ ಡಿ.ಡಿ. ಪಡೆದು ಸಂದಾಯ ಮಾಡಬಹುದು. ಇಲ್ಲವೇ ಚಲನ್ ಮುಖಾಂತರ ಪರೀಕ್ಷಾ ಶುಲ್ಕವನ್ನು ಸಂದಾಯ ಮಾಡಿದಲ್ಲಿ 0230 ಕಾರ್ಮಿಕ ಮತ್ತು ಉದ್ಯೋಗ, 103 ಸ್ವೀಮ್ ಬಾಯ್ಲರುಗಳ ಪರಿವೀಕ್ಷಣಾ ಶುಲ್ಕ ಲೆಕ್ಕಶೀರ್ಷಿಕೆಯಲ್ಲಿ ಜಮಾ ಮಾಡಬೇಕು.
ಈ ಪರೀಕ್ಷೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ಕಚೇರಿಯಿಂದ ಅಥವಾ ದೂ.ಸಂ. 08026531203 ಅಥವಾ ಇ-ಮೇಲ್: ಢ್ಝಟಿಟ್ಟ್ಡಟ್ಝಅ್ಜಟಛ್ಝಟ.್ಛ್ಟಟ ಅನ್ನು ಸಂಪರ್ಕಿಸಿ ಪಡೆಯಬಹುದು. ಭರ್ತಿ ಮಾಡಿದ ಪರೀಕ್ಷಾ ಅರ್ಜಿಗಳನ್ನು ಸಲ್ಲಿಸಲು ಡಿ.20 ಕೊನೆ ದಿನಾಂಕವಾಗಿದೆ ಎಂದು ಬಾಯ್ಲರುಗಳ ಆಪರೇಷನ್ ಎಂಜಿನಿಯರ್ಸ್ ಪರೀಕ್ಷಾ ಮಂಡಳಿಯ ಕಾರ್ಯದರ್ಶಿ ಕೆ.ವಿ.ಚಂದ್ರಮೌಳಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

