15ರೋಳಗೆ ಖಾತ್ರಿ ಕಾಮಗಾರಿಗಳು ನಡೆಯಲಿ: ಸಿಇಒ ಎಸ್.ಎ. ಜಿಲಾನಿ
ಕೆಂಭಾವಿ: ಮುಖ್ಯಮಂತ್ರಿಗಳು ನ.15ರಂದು ಜಿಲ್ಲೆಗೆ ಆಗಮಿಸಿಲಿದ್ದು, ಅಷ್ಟರಲ್ಲಿ ಜಿಲ್ಲಾದ್ಯಂತ ಉದ್ಯೋಗ ಖಾತ್ರಿ ಕಾಮಗಾರಿಗಳು ಪ್ರತಿ ಹಳ್ಳಿಗಳಲ್ಲಿ ನಡೆಯಬೇಕೆಂದು ಜಿಪಂ ಸಿಇಒ ಎಸ್.ಎ. ಜಿಲಾನಿ ಸೂಚಿಸಲಾಗಿದೆ.
ಜಿಲ್ಲಾ ಮಟ್ಟದ ಖಾತ್ರಿ ಯೋಜನೆಯ ವೈಯಕ್ತಿಕ ಮತ್ತು ಸಾಮೂಹಿಕ ಕಾಮಗಾರಿಗಳ ನಿರ್ವಹಣೆಯ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಜಿಲ್ಲೆಯ 16 ಹೋಬಳಿ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಹೋಗಿ ಸ್ಥಳದಲ್ಲೇ ಮಂಜೂರತಿ ನೀಡುವ ಯೋಜನೆ ಇದಾಗಿದ್ದು, ನ. 14 ಮಕ್ಕಳ ದಿನಾಚರಣೆಯಂದು ಪ್ರತಿ ತಾಲೂಕಿನ 20 ಗ್ರಾಪಂಗಳಲ್ಲಿ ಕ್ರೀಡಾಂಗಣಗಳ ನಿರ್ಮಾಣಕ್ಕೆ ಚಾಲನೆ ಹೊರಕುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಯೋಜನೆ ಬಗ್ಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರ್ಮಿಕ ಕೆಲಸ ಬೇಕು ಎಂದು ಅರ್ಜಿ ಸಲ್ಲಿಸಿದರೆ ಕೆಲಸ ನೀಡಲೇಬೇಕು. ಈಗಾಗಲೇ ಈ ವಲಯದ ಒಂಭತ್ತು ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸಕ್ಕಾಗಿ 183 ಅರ್ಜಿಗಳು ಬಂದರೂ ಕೇವಲ 24 ಕಾರ್ಮಿಕರಿಗೆ ಮಾತ್ರ ಕೆಲಸ ಒದಗಿಸಲಾಗಿದೆ. ಇದಕ್ಕೆ ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕಾಮಗಾರಿ ನಿರ್ವಹಿಸದ ಅಧಿಕಾರಿಗಳಿಗೆ ಎಮ್‌ಜಿಎನ್‌ಆರ್‌ಜಿಎ ಕಾಯಿದೆ ಅಡಿಯಲ್ಲಿ ಪ್ರಕರಣ 25ರಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ತಿಳಿಸಿದರು.
ಇಂದು ಕೆಂಭಾವಿಯಲ್ಲಿ ನಡೆದ ಅಭಿಯಾನದಲ್ಲಿ ವಿವಿಧ ಗ್ರಾಪಂಗಳಿಂದ 1000 ಸಾವಿರ ಅರ್ಜಿಗಳು ಬಂದಿದ್ದು, ಅವುಗಳನ್ನು ಸ್ಥಳದಲ್ಲಿಯೇ ಮಂಜೂರಿ ಮಾಡಿ ನಾಳೆಯಿಂದಲೇ ಕಾಮಗಾರಿಗಳನ್ನು ಆರಂಭಿಸಿ ಯುದ್ಧೋಪಾದಿಯಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

