ರ್ಯಾಲಿಗೆ ಜಿಲ್ಲೆಯಿಂದ 10000 ಮಂದಿ
ಕನ್ನಡಪ್ರಭ ವಾರ್ತೆ ಗುಲ್ಬರ್ಗ ನ.9
ಬೆಂಗಳೂರಿನ ಅರಮನೆ ಆವರಣದಲ್ಲಿ ನ.17ರಂದು ನಡೆಯಲಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಬೃಹತ್ ರ್ಯಾಲಿಗೆ ಜಿಲ್ಲೆಯಿಂದ 10 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಸಂಘಟನಾ ಕಾರ್ಯದರ್ಶಿ ಮುಕುಂದ ದೇಶಪಾಂಡೆ ಹೇಳಿದರು.
ಪಟ್ಟಣದ ವೆಂಕಟೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಶನಿವಾರ ನಡೆದ ನರೇಂದ್ರ ಮೋದಿ ರ್ಯಾಲಿಗೆ ಭಾಗವಹಿಸಲು ಸದಸ್ಯತ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಚಿಂಚೋಳಿ- ಸೇಡಂ- ಚಿತ್ತಾಪುರ ತಾಲೂಕಿನ ಬಿಜೆಪಿ ಕಾರ್ಯಕರ್ತರಿಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ ಮತ್ತು ಗುಲ್ಬರ್ಗ ಗ್ರಾಮೀಣ ಪ್ರದೇಶ ಕಾರ್ಯಕರ್ತರಿಗೆ 100 ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಚಿಂಚೋಳಿ ವಿಧಾನಸಭಾ ಮೀಸಲು ಮತಕ್ಷೇತ್ರದಿಂದ ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಬೆಂಗಳೂರಿನಲ್ಲಿ 1500 ಸ್ಥಳಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. 2000 ಅಡುಗೆದಾರರಿಗೆ ನೇಮಕಗೊಳಿಸಲಾಗಿದೆ ಎಂದರು.
ರೇಲ್ವೆ ಮತ್ತು ಬಸ್ ನಿಲ್ದಾಣದಲ್ಲಿ ಕಾರ್ಯಕರ್ತಗೆ ಕೆಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಾಗಿರಬೇಕಾಗಿದೆ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಬೃಹತ್ ರ್ಯಾಲಿ ಯಶಸ್ವಿಗೊಳಿಸಬೇಕೆಂದು ಮುಕುಂದ ದೇಶಪಾಂಡೆ ತಿಳಿಸಿದರು.
ಬಿಜೆಪಿ ಹಿರಿಯ ಮುಖಂಡ ಮಧುಸೂಧನ ಕಾಟಾಪುರ ಮಾತನಾಡಿ, ದೇಶದಲ್ಲಿ ನರೇಂದ್ರ ಮೋದಿ ಯುಗ ಪ್ರಾರಂಭವಾಗಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ನಡುಕ ಹುಟ್ಟುಕೊಂಡಿದೆ ಎಂದರು.
ಜಿಪಂ ಸದಸ್ಯ ಸಂಜೀವನ್ ಯಾಕಾಪುರ, ತಾಲೂಕು ಅಧ್ಯಕ್ಷ ಶಾಮಸುಂದರ ಪವಾರ, ಮಹೇಶ ಬೆಮಳಗಿ, ಪ್ರಶಾಂತ ಕೊಡದುರ, ವಿದ್ಯಾಸಾಗರ ಖಾನಾಪುರ, ಶಶಿಕಲಾ ಟೆಂಗಳಿ, ಮುಕುಂದರಾವ್ ಕೊಡದೂರ, ಲಾಲಪ್ಪ ಹೊಳ್ಕರ್, ಸಂತೋಷ ಪಾಟೀಲ್, ಗುಂಡೇರಾವ್ ತೆಂಗಳಿ, ರಾಮಶೆಟ್ಟಿ ಪಾಟೀಲ್, ಮೋತಿರಾಮ ನಾಯಕ, ಅಂಜನಾದೇವಿ, ರಾಮಚಂದ್ರ ಪಾಟೀಲ್ ಮುಂತಾದವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಅಧ್ಯಕ್ಷ ರೇವಣಸಿದ್ದಪ್ಪ ಮಜ್ಜಗಿ ಸ್ವಾಗತಿಸಿ, ಶ್ರೀಧರ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು. ಸೂರ್ಯಕಾಂತ ದೇಗಲಮಡಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

